Thursday, May 2, 2024
spot_imgspot_img
spot_imgspot_img

ಸಂತೋಷದ ಪ್ರವಾಸ ಕಣ್ಣೀರಲ್ಲಿ ಅಂತ್ಯ; ಹಿಂದಿರುಗುತ್ತಿದ್ದಾಗ ಬಸ್ಸು ಪಲ್ಟಿಗೊಂಡು ಇಬ್ಬರು ವಿದ್ಯಾರ್ಥಿಗಳು ದುರ್ಮರಣ

- Advertisement -G L Acharya panikkar
- Advertisement -

ಪಿಕ್ನಿಕ್ ಮುಗಿಸಿ ಹಿಂದಿರುಗುತ್ತಿದ್ದ ಶಾಲಾ ಬಸ್ ಪಲ್ಟಿಯಾಗಿ ಇಬ್ಬರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ದು, ಹಲವರು ಗಾಯಗೊಂಡಿರುವ ಘಟನೆ ಮುಂಬೈ ಬಳಿ ಇಂದು ಬೆಳಗ್ಗಿನ ಜಾವ ನಡೆದಿದೆ.

ಕೋಚಿಂಗ್ ತರಗತಿ ವಿದ್ಯಾರ್ಥಿಗಳು ಪಿಕ್ನಿಕ್ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ರಾಯಗಢ ಜಿಲ್ಲೆಯ ಖೋಪೋಲಿ ಎಂಬಲ್ಲಿ ದುರಂತ ಸಂಭವಿಸಿದೆ. ಮುಂಬೈನ ಚೆಂಬೂರ್‌ನಲ್ಲಿರುವ ಕೋಚಿಂಗ್ ಕೇಂದ್ರದ 10ನೇ ತರಗತಿಯ 48 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ಲೋನಾವಾಲಾದಿಂದ ಹಿಂತಿರುಗುತ್ತಿತ್ತು.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬೆಟ್ಟದಿಂದ ಇಳಿಯುತ್ತಿದ್ದ ವೇಳೆ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇತರ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಲೋನಾವಾಲಾ, ಖೋಪೋಲಿ ಮತ್ತು ಇತರ ಹತ್ತಿರದ ಪ್ರದೇಶಗಳಲ್ಲಿನ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

- Advertisement -

Related news

error: Content is protected !!