- Advertisement -
- Advertisement -

ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿರು ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ.

೨೨-೧೦-೨೦೨೨ರಂದು (ನಿನ್ನೆ) 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ನಿಗದಿ ಮಾಡಲಾಗಿತ್ತು. ಆದರೆ ಸಚಿವರು ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದಾರೆ. ಹೀಗಾಗಿ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಗಿದೆ. ತನ್ನ ಸಮಸ್ಯೆ ಹೇಳಿಕೊಳ್ಳಲು ಮಹಿಳೆ ಓರ್ವರು ಸಚಿವರ ಬಳಿ ತೆರಳಿದ್ದಾರೆ. ಈ ವೇಳೆ ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ. ಘಟನೆ ನಂತರ ಪರಿಸ್ಥಿತಿಯನ್ನ ಪೊಲೀಸರು ತಿಳಿಗೊಳಿಸಿದರು.

- Advertisement -