Friday, May 10, 2024
spot_imgspot_img
spot_imgspot_img

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಏ.1 ರಿಂದ ಶೇ.17ರಷ್ಟು ವೇತನ ಹೆಚ್ಚಳ : ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

- Advertisement -G L Acharya panikkar
- Advertisement -
vtv vitla

ಬೆಂಗಳೂರು: ಏಳನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ(ಎನ್‌ಪಿಎಸ್‌) ರದ್ದು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಕೊನೆಗೂ ಈಡೇರಿದೆ. ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ.

ಸರಕಾರಿ ನೌಕರರಿಗೆ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳಕ್ಕೆ ಸರಕಾರದ ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರ ಹಾಕಿದೆ. ಎಪ್ರಿಲ್ 1, 2023 ರಿಂದ ಈ ಆದೇಶ ಜಾರಿ ಆಗಲಿದೆ ಎಂದು ಸರಕಾರ ಘೋಷಿಸಿದೆ. ಈ ಮೂಲಕ ನೌಕರರ ಪ್ರತಿಭಟನೆ ಅಂತ್ಯವಾಗಲಿದೆ. ಸಿಎಂ ಸೂಚನೆ ಮೇರೆಗೆ ಈ ಅಧಿಕೃತ ಆದೇಶ ಹೊರ ಬಿದ್ದಿದೆ.

ಸರ್ಕಾರಿ ನೌಕರರು ಎನ್‌ಪಿಎಸ್‌ ರದ್ದುಗೊಳಿಸುವ ಬೇಡಿಕೆಯನ್ನು ಇಟ್ಟಿದ್ದರು. ಈ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, “ಎನ್‌ಪಿಎಸ್‌ ಬೇರೆ-ಬೇರೆ ರಾಜ್ಯಗಳಲ್ಲಿ ಏನು ಆಗಿದೆ? ಎಂದು ಎರಡು ತಿಂಗಳಿನಲ್ಲಿ ಎಸಿಎಸ್ ನೇತೃತ್ವದಲ್ಲಿ ವರದಿ ತರಿಸಿಕೊಳ್ಳುತ್ತೇವೆ. ಸರ್ಕಾರಿ ನೌಕರರು ಮುಷ್ಕರ ಕೈ ಬಿಡುವ ವಿಶ್ವಾಸವಿದೆ. ಮುಷ್ಕರ ಕೈ ಬಿಡಿ ಎಂದು ನಾನು ಮನವಿ ಮಾಡುತ್ತೇನೆ” ಎಂದರು.

ಆದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾಡಿರುವ ಘೋಷಣೆಗೆ ಪ್ರತಿಕ್ರಿಯೆ ನೀಡಿರುವ ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಆದೇಶ ಪ್ರತಿ ಬಂದ ಬಳಿಕವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸರಕಾರದ ಭರವಸೆಯ ಮಾತಿಗೆ ನಾವು ಒಪ್ಪಿಗೆ ಸೂಚಿಸುವುದಿಲ್ಲ. ಕೇವಲ ಬಾಯಿ ಮಾತಿನ ಭರವಸೆ ನಮಗೆ ಬೇಡ. ಅಲ್ಲಿಯವರೆಗೆ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ. ಆರ್ಥಿಕ ಇಲಾಖೆ ಅಧಿಕಾರಿಗಳು ಸಭೆಗೆ ಕರೆದಿದ್ದು, ಸಭೆ ಬಳಿಕ ಮುಂದಿನ ನಿರ್ಧಾರದ ಬಗ್ಗೆ ತಿಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಸರಕಾರ ಈಗ ತನ್ನ ನೌಕರರ ಭೇಡಿಕೆಗೆ ಒಪ್ಪಿಗೆ ಸೂಚಿಸಿ ಅಧಿಕೃತ ಆದೇಶ ಹೊರಡಿಸಿದೆ. 7 ನೇ ವೇತನ ಆಯೋಗ ವರದಿ ಅನ್ವಯ ಮಾತುಕತೆ ನಡೆಸಿ ಈ ಆದೇಶ ಹೊರ ಬಿದ್ದಿದೆ. ಹೀಗಾಗಿ ಎಪ್ರಿಲ್ 1 , 2023 ರಿಂದ ಸರಕಾರಿ ನೌಕರರಿಗೆ ಈ ಆದೇಶ ಅನ್ವಯವಾಗಲಿದೆ.

- Advertisement -

Related news

error: Content is protected !!