Thursday, March 28, 2024
spot_imgspot_img
spot_imgspot_img

ಸಾರ್ವಜನಿಕವಾಗಿ ಹಬ್ಬಗಳ ಆಚರಣೆಗೆ ನಿರ್ಬಂಧ; ಮೊಹರಂ, ಗಣೇಶ ಹಬ್ಬ ಆಚರಿಸಲು ಮಾರ್ಗಸೂಚಿ ಬಿಡುಗಡೆ

- Advertisement -G L Acharya panikkar
- Advertisement -

ಬೆಂಗಳೂರು: 2021ನೇ ಸಾಲಿನ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೋಹರಂ ಮತ್ತು ಇತರೆ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಗಟ್ಟಲು ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ.

ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯವು 2021ರ ಆಗಸ್ಟ್ ರಿಂದ ಅಕ್ಟೋಬರ್ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳಾದಂತ ಮೋಹರಂ, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದುರ್ಗಾ ಪೂಜೆ ಮೊದಲಾದ ಹಬ್ಬಗಳನ್ನು ಆಚರಿಸುವಾಗ ಜನದಟ್ಟಣೆ ಮತ್ತು ಒಗ್ಗೂಡುವಿಕೆಗಳನ್ನು ತಡೆಗಟ್ಟಲು ಸ್ಥಳೀಯ ನಿರ್ಬಂಧಗಳನ್ನು ವಿಧಿಸಲಾಗಿದೆ.

ಮೊಹರಂ ಹಬ್ಬದಂದು ಅನುಸರಿಸಲು ಮಾರ್ಗಸೂಚಿಗಳು:

  • ಸಾರ್ವಜನಿಕ ಸ್ಥಳಗಳಲ್ಲಿ ಆಲಂಗಳು, ಪಂಜಾವನ್ನು ಸ್ಥಾಪಿಸುವುದನ್ನು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ.
  • ಪಂಜ, ಆಲಂ ಮತ್ತು ತಾಜಿಯತ್ ಗಳನ್ನು ಸಾರ್ವಜನಿಕರು ಮುಟ್ಟದೇ ದೂರದಿಂದ ನೋಡತಕ್ಕದ್ದು.
  • ಖಬರಸ್ಥಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಯಾವುದೇ ತರಹದ ಸಭೆ ಏರ್ಪಡಿಸುವುದನ್ನು ನಿರ್ಬಂಧಿಸಲಾಗಿದೆ.
  • ಪ್ರಾರ್ಥನಾ ಸ್ಥಳಗಳಲ್ಲಿ ಮುಖ ಗವಸನ್ನು ಕಡ್ಡಾಯವಾಗಿ ಧರಿಸುವುದು.
  • 60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡವುದು.
  • ಸಾಮೂಹಿಕ ಪ್ರಾರ್ಥನೆ ನಡೆಸುವಂತಿಲ್ಲ. ಒಂದು ವೇಳೆ ಹೆಚ್ಚು ಜನರು ಆಗಮಿಸಿದಲ್ಲಿ, ಎರಡು ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುವುದು.
  • ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವಂತಿಲ್ಲ.
  • ಹಸ್ತಲಾಘವ, ಆಲಿಂಗನ ಮಾಡುವಂತಿಲ್ಲ
  • ಮಸೀದಿ ಹೊರತುಪಡಿಸಿ, ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಮೋಹರಂ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜಿಸುವಂತಿಲ್ಲ.
  • ಮೋಹರಂ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ, ಸಾರ್ವಜನಿಕ ಸ್ಥಳಗಳ್ಲಿ ಭಾಷಣ ಕಾರ್ಯಕ್ರಮ ಆಯೋಜಿಸುವಂತಿಲ್ಲ.

ಗಣೇಶ ಹಬ್ಬದ ಮಾರ್ಗಸೂಚಿಗಳು :

  • ಸರಳವಾಗಿ ದೇವಸ್ಥಾನದೊಳಗೆ ಹಬ್ಬ ಆಚರಿಸುವುದು.
  • ದೇವಸ್ಥಾನ ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ, ಹೊರಾಂಗಣಗಳಲ್ಲಿ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ.
  • ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
  • ಪಾರಂಪರಿಕ ಗೌರಿ ಗಣೇಶ ಮೂರ್ತಿಯನ್ನು ಪೂಜಿಸುವುದು, ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು. ಇಲ್ಲವೇ ಸಮೀಪದ ಜಿಲ್ಲಾಡಳಿತ ಸೂಚಿಸಿದಂತಹ ಸ್ಥಳಗಳಲ್ಲಿ ವಿಸರ್ಜಿಸುವುದು.
  • ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನ ನಿತ್ಯ ಸ್ಯಾನಿಟೈಸೇಷನ್ ಮಾಡುವುದು.
  • ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡುವುದು.
  • ದರ್ಶನಕ್ಕೆ ಬರುವ ಭಕ್ತರು ಕೋವಿಡ್ ನಿಯಂತ್ರಣ ಕ್ರಮಗಳಾದಂತ ಮಾಸ್ಕ್ ಧರಿಸೋದು, 6 ಅಡಿ ಸಾಮಾಜಿಕ ಅಂತರ ಕಾಪಾಡೋ ನಿಯಮ ಪಾಲನೆ ಕಡ್ಡಾಯ.
  • ಗಣೇಶ ಹಬ್ಬ ಆಚರಣೆಗೆ ಸ್ಥಳೀಯ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹೊರಡಿಸುವಂತ ಆದೇಶಗಳನ್ನು ಪಾಲಿಸುವುದು
- Advertisement -

Related news

error: Content is protected !!