Wednesday, June 17, 2026
spot_imgspot_img
spot_imgspot_img

ಸಿಎಎ ಕಾಯ್ದೆ ಜಾರಿಗೊಳಿಸಿಯೇ ಸಿದ್ಧ; ಗೃಹ ಸಚಿವ ಅಮಿತ್ ಶಾ

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ವಕ್ಕರಿಸಿಕೊಂಡ ಬಳಿಕ ದೂರವಾಗಿದ್ದ ಸಿಎಎ ವಿಚಾರ ಮತ್ತೆ ಮುನ್ನಲೆಗೆ ಬರುವ ಲಕ್ಷಣಗಳು ಗೋಚರಿಸುತ್ತಿವೆ. ಸಿಎಎ ಕಾಯ್ದೆಯನ್ನು ಜಾರಿಗೊಳಿಸಲಾಗುವುದೆಂದು ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ.

ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಅಮಿತ್ ಶಾ, ಈ ವಿಚಾರವನ್ನು ತಿಳಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ಬರುವುದಿಲ್ಲ ಎಂದು ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೀಡುತ್ತಿರುವ ಹೇಳಿಕೆಯನ್ನು ಖಂಡಿಸಿದ್ದಾರೆ.

“ನಾನೀಗ ಉತ್ತರ ಬಂಗಾಳಕ್ಕೆ ಬಂದಿದ್ದೇನೆ. ಸಿಎಎ ಜಾರಿಗೆ ಬರಲ್ಲ ಎಂದು ತೃಣಮೂಲ ಕಾಂಗ್ರೆಸ್ ಪಕ್ಷ ಸುಳ್ಳು ಸುದ್ದಿ ಹರಡುತ್ತಿದೆ. ಆದರೆ, ಕೊರೋನಾ ನಿಯಂತ್ರಣಕ್ಕೆ ಬಂದ ಬಳಿಕ ಕಾಯ್ದೆ ಜಾರಿಗೊಳಿಸಲಾಗುವುದೆಂದು ಅವರು ಹೇಳಿದ್ದಾರೆ. ಈ ವಿಚಾರದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಯಾವುದೇ ಅಧಿಕಾರ ಹೊಂದಿಲ್ಲ. ಅವರಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

- Advertisement -

Related news

error: Content is protected !!