Tuesday, June 23, 2026
spot_imgspot_img
spot_imgspot_img

ಸಿಖ್ಖರ ಪವಿತ್ರ ಕ್ಷೇತ್ರವನ್ನು ಅಪವಿತ್ರಗೊಳಿಸಲು ಯತ್ನಿಸಿದ ಯುವಕನ್ನು ಥಳಿಸಿ ಹತ್ಯೆ

- Advertisement -
- Advertisement -
vtv vitla
vtv vitla
vtv vitla
vtv vitla

ಅಮೃತಸರ: ಪಂಜಾಬ್ ನಲ್ಲಿರುವ ಸಿಖ್ಖರ ಪವಿತ್ರ ಕ್ಷೇತ್ರ ಅಮೃತಸರದ ಸ್ವರ್ಣ ಮಂದಿರವನ್ನು ಅಪವಿತ್ರಗೊಳಿಸಲು ಪ್ರಯತ್ನಿಸಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೋಪಗೊಂಡ ಭಕ್ತರು ಯುವಕನೊಬ್ಬನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಮೃತಸರ ಗೋಲ್ಡನ್ ಟೆಂಪಲ್ ನಲ್ಲಿ ಸಂಜೆ ನಡೆಯುವ ಪ್ರಾರ್ಥನೆ ವೇಳೆ ಆ ಯುವಕ ಕಬ್ಬಿಣದ ಸರಪಳಿಯ ಮೇಲಿನಿಂದ ಹಾರಿ ಗುರು ಗ್ರಂಥ ಸಾಹೀಬ್ (ಸಿಖ್ ಧರ್ಮದ ಪವಿತ್ರ ಗ್ರಂಥ) ಬಳಿ ಇರಿಸಲಾಗಿದ್ದ ಖಡ್ಗವನ್ನು ಎತ್ತಿಕೊಂಡಿದ್ದ ಎನ್ನಲಾಗಿದೆ.

ಈ ವರ್ತನೆಯಿಂದ ಕೋಪಗೊಂಡ ಪ್ರಾರ್ಥನಾನಿರತ ಸಿಖ್ಖರ ಗುಂಪು ಹಾಗೂ ಅಲ್ಲಿದ್ದ ಭದ್ರತಾ ಸಿಬ್ಬಂದಿ ಆತನಿಗೆ ಮನಬಂದಂತೆ ಥಳಿಸಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಆತ ಸಾವನ್ನಪ್ಪಿದ್ದಾನೆ. ನೀಟಾಗಿ ಕ್ಷೌರ ಮಾಡಿಸಿಕೊಂಡಿದ್ದ ಆತ ತಲೆಗೆ ಹಳದಿ ಬಣ್ಣದ ಬಟ್ಟೆ ಕಟ್ಟಿಕೊಂಡಿದ್ದ. ಕರ್ತವ್ಯನಿರತ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುವಾಗ ಆತನಿಗೆ ಥಳಿಸಿದ್ದರು. ಅಲ್ಲಿದ್ದ ಸಿಖ್ಖರು ಕೂಡ ಆತನಿಗೆ ಹೊಡೆದಿದ್ದರು ಎಂದು ತಿಳಿದುಬಂದಿದೆ.

vtv vitla
vtv vitla
vtv vitla
- Advertisement -

Related news

error: Content is protected !!