Tuesday, May 21, 2024
spot_imgspot_img
spot_imgspot_img

ಸಿದ್ದುಗೆ ಧರ್ಮ ಪಶ್ಚಾತ್ತಾಪ? ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ.!!

- Advertisement -G L Acharya panikkar
- Advertisement -

ಧರ್ಮ ಒಡೆಯುವುದು ನನ್ನ ಉದ್ದೇಶವಾಗಿರಲಿಲ್ಲ. ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿರುವುದಾಗಿ ರಂಭಾಪುರಿ ಶ್ರೀ ಪ್ರಸನ್ನ ರೇಣುಕ ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ಮಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಶ್ರೀಗಳು, ಸಿದ್ದರಾಮಯ್ಯ ಅವರು ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಸಂಬಂಧಿಸಿ ತಮ್ಮ ನಡೆ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸಿದರು. ಮುಂದಿನ ದಿನಗಳ ರಾಜ್ಯ ಹಾಗೂ ಜನರ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ ಎಂದು ತಿಳಿಸಿದರು ಎಂದರು.

- Advertisement -

Related news

error: Content is protected !!