Wednesday, May 8, 2024
spot_imgspot_img
spot_imgspot_img

ಸಿದ್ಧರಾಮಯ್ಯನಿಗೆ ಮತ್ತೆ ಕಪ್ಪು ಬಾವುಟ ಪ್ರದರ್ಶನ; ಹಿಂದೂ ಕಾರ್ಯಕರ್ತರಿಂದ “ಗೋ ಬ್ಯಾಕ್‌ ಘೋಷಣೆ”

- Advertisement -G L Acharya panikkar
- Advertisement -

ಚಿಕ್ಕಮಗಳೂರು: ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಶುಕ್ರವಾರವೂ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ವೀರ ಸಾವರ್ಕರ್‌ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಆಕ್ರೋಶ ಹೊರಹಾಕುತ್ತಿದ್ದು, ಕೊಡಗಿನ ನಂತರ ಚಿಕ್ಕಮಗಳೂರಿನಲ್ಲೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ.

ಚಿಕ್ಕಮಗಳೂರಿನಲ್ಲಿ ಮಳೆಹಾನಿ ಪ್ರದೇಶಗಳಿಗೆ ಸಿದ್ಧರಾಮಯ್ಯ ಭೇಟಿ ನೀಡುವ ವೇಳೆ ಪೊಲೀಸ್‌ ಬಿಗಿಭದ್ರತೆಯ ಮಧ್ಯೆಯೂ ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಸಾವರ್ಕರ್ ಬಗ್ಗೆ ಹೇಳಿಕೆಗೆ ಹಿಂದೂ ಪರ ಸಂಘಟನೆಗಳು ಕಿಡಿಕಾರಿದ್ದು, ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ನಿನ್ನೆ ಗೋ ಬ್ಯಾಕ್ ಸಿದ್ದು ಅಭಿಯಾನ ಆರಂಭಿಸಿದ್ದ ಸಂಘಟನೆಗಳು, ”ಹಿಂದೂ ವಿರೋಧಿ ಸಿದ್ದು ಈ ಪುಣ್ಯ ಭೂಮಿಗೆ ಬರುವುದು ಬೇಡ” ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದರು. ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆಯೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಕಪ್ಪು ಬಟ್ಟೆ, ಬಿಜೆಪಿ ಶಾಲು, ಸಾವರ್ಕರ್ ಫೋಟೋ ಹಿಡಿದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿದೆ.

ಶೃಂಗೇರಿ ಸಮಿಪದ ಮೆಣಸೆ ಗ್ರಾಮದಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಯತ್ನ ಮಾಡಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದಾರೆ. ರಸ್ತೆ ಮಧ್ಯೆ ಎರಡು ಪಕ್ಷದ ಕಾರ್ಯಕರ್ತರ ಮುಖಾಮುಖಿಯಾಗಿದ್ದು, ಎಎಸ್ಪಿ ಎದುರೇ ಎರಡು ಪಕ್ಷದವರಿಂದ ಪರಸ್ಪರ ರಸ್ತೆ ಮಧ್ಯೆ ತಳ್ಳಾಟ ನೂಕಾಟ ನಡೆದಿದೆ. ಹಗ್ಗದ ಮೂಲಕ ಎರಡೂ ಪಕ್ಷದ ಕಾರ್ಯಕರ್ತರನ್ನು ಕೈಕೈ ಮಿಲಾಯಿಸುವುದನ್ನು ತಡೆಯಲು ಯತ್ನಿಸಿದ ಪೊಲೀಸರು.ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರು ಅರ್ಧ ಕಿ.ಮೀ.ವರೆಗೆ ತಳ್ಳಿಕೊಂಡು ಬಂದಿದ್ದಾರೆ.

- Advertisement -

Related news

error: Content is protected !!