Tuesday, April 23, 2024
spot_imgspot_img
spot_imgspot_img

ಸಿಲಿಂಡರ್‌ ಸ್ಫೋಟಗೊಂಡು ಹೊತ್ತಿ ಉರಿದ ಮನೆ; ಒಂದೇ ಕುಟುಂಬ ಐವರು ಸಜೀವ ದಹನ

- Advertisement -G L Acharya panikkar
- Advertisement -

ರಾಜಾವರ್‌: ಏಕಾಏಕಿಯಾಗಿ ಮನೆಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಒಂದೇ ಕುಟುಂಬ ಐದು ಮಂದಿ ಮೃತಪಟ್ಟಿರುವ ಘಟನೆ ಬಿಹಾರದ ಬಂಕಾ ಜಿಲ್ಲೆಯ ರಾಜಾವರ್​ ಗ್ರಾಮದಲ್ಲಿ ನಡೆದಿದೆ.

vtv vitla
vtv vitla

ಮೃತರನ್ನು ಅಂಕುಶ್​ ಕುಮಾರ್​ (10), ಶಿವಾನಿ ಕುಮಾರಿ​ (9), ಸೋನಿ ಕುಮಾರಿ (8), ಸೀಮಾ ಕುಮಾರಿ(5), ಮತ್ತು ಅಂಶುಕುಮಾರಿ (10) ಎಂದು ಗುರುತಿಸಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಅಡುಗೆ ಸಿಲಿಂಡರ್‌ ಸ್ಫೋಟದಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದರೂ ನಿಖರ ಕಾರಣ ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಒಂದು ಸುಟ್ಟು ಕರಕಲಾಗಿರುವ ಸಿಲಿಂಡರ್​ ಗ್ಯಾಸ್​ ಮತ್ತು ರೆಗ್ಯುಲೇಟರ್​ ಸಿಕ್ಕಿದೆ. ಮನೆಯಲ್ಲಿ ಯಾವುದೇ ವಸ್ತುವೂ ಉಳಿದಿಲ್ಲ. ಎಲ್ಲವೂ ಸುಟ್ಟು ಬೂದಿಯಾಗಿದ್ದು, ಬೆಂಕಿ ಬಿದ್ದಿರುವ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಬಂಕಾ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್​ ಕುಮಾರ್ ಗುಪ್ತಾ ತಿಳಿಸಿದ್ದಾರೆ.

- Advertisement -

Related news

error: Content is protected !!