Sunday, July 6, 2025
spot_imgspot_img
spot_imgspot_img

ಸಿಲಿಕಾನ್‌ ಸಿಟಿಗೆ ಬಂದಿಳಿದ ಪ್ರಧಾನಿ ಮೋದಿ

- Advertisement -
- Advertisement -
vtv vitla

ಬೆಂಗಳೂರು ಪ್ರಧಾನಿ ನರೇಂದ್ರ ಮೋದಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಪ್ರಧಾನಿಯವರನ್ನು ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿ ಹಲವರು ಹೆಚ್ ಎ ಎಲ್‌ ಏರ್‌ಪೋರ್ಟ್‌ನಲ್ಲಿ ಸ್ವಾಗತಿಸಿದರು. ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ನಂತರ ವಿಧಾನಸೌಧಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯಲ್ಲಿನ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ನಂತರ ಬೃಹತ್‌ ಸಮಾವೇಶದಲ್ಲಿ ಭಾಗಿಯಾಗಿ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

- Advertisement -

Related news

error: Content is protected !!