Friday, March 29, 2024
spot_imgspot_img
spot_imgspot_img

ಸಿಲಿಕಾನ್ ಸಿಟಿಯಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ವಿಟ್ಲ ಮೂಲದ ವ್ಯಕ್ತಿಯ ಬಂಧನ

- Advertisement -G L Acharya panikkar
- Advertisement -
vtv vitla
vtv vitla

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ನಡೆದಿದೆ. ಬೆಂಗಳೂರು ಹೆಬ್ಬಾಳ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ನಾಗೇಹಳ್ಳಿ, ಪಿಳೇಕಮ್ಮ ದೇವಸ್ಥಾನ, ರೈಲ್ವೇ ಟ್ರಾಕ್ ಬಳಿ ಇಬ್ಬರು ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಬಂಧಿತರನ್ನು ವಿಟ್ಲ ಪಡ್ನೂರು ಗ್ರಾಮದ ಕೊಂಡಗಾಯಿ ನಿವಾಸಿ ಹಸನ್ ಸಾಧಿಕ್ ಅಲಿಯಾಸ್

ಬ್ಲೇಡ್ ಸಾದಿಕ್ ಬಿನ್ ಅಬ್ಬಾಸ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ಬೆಂಗಳೂರಿನ ತಲ್ಲಾಖಾನ್ ಬಿನ್ ಅಶ್ವಾಕ್ ಎನ್ನಲಾಗಿದೆ. ಬಂಧಿತ ಆರೋಪಿಗಳಿಂದ 23 ಗ್ರಾಂ ಎಂ.ಡಿ,ಎಂ.ಎ ಮತ್ತು ರಾಯಲ್ ಎನ್‌ಫೀಲ್ಡ್‌ ಬೈಕ್‌ ಅನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!