Thursday, June 25, 2026
spot_imgspot_img
spot_imgspot_img

ಸುಪ್ರಿಂಕೋರ್ಟ್‌ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು. ಲಲಿತ್ ನೇಮಕ

- Advertisement -
- Advertisement -

ನವದೆಹಲಿ: ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರಿಂಕೋರ್ಟ್ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನೇಮಕಗೊಂಡಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಈ ತಿಂಗಳಾಂತ್ಯಕ್ಕೆ ನಿವೃತ್ತಿಯಾಗಲಿದ್ದು, ಅವರ ಉತ್ತರಾಧಿಕಾರಿಯನ್ನಾಗಿ ಉದಯ್ ಉಮೇಶ್ ಲಲಿತ್ ಅವರ ಹೆಸರನ್ನು ಕಳೆದ ವಾರ ಶಿಫಾರಸು ಮಾಡಿದ್ದರು. ಆಗಸ್ಟ್ 26 ರಂದು ನ್ಯಾಯಮೂರ್ತಿ ರಮಣ ಅವರು ಮುಖ್ಯ ನಾಯ್ಯಮೂರ್ತಿ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ.

ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅತ್ಯಂತ ಹಿರಿಯ ನ್ಯಾಯಾಧೀಶರು. ನೇರವಾಗಿ ಬಾರ್‌ನಿಂದ ಸುಪ್ರೀಂ ಕೋರ್ಟ್‌ಗೆ ಅವರನ್ನು ನೇಮಕ ಮಾಡಲಾಯಿತು. ನ್ಯಾಯಮೂರ್ತಿ ಲಲಿತ್ ಅವರು ಈ ವರ್ಷ ನವೆಂಬರ್ 8ರಂದು ನಿವೃತ್ತರಾಗಲಿದ್ದು, ಮೂರು ತಿಂಗಳಿಗಿಂತ ಕಡಿಮೆ ಅವಧಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಹೊಂದಿರುತ್ತಾರೆ ಎನ್ನಲಾಗಿದೆ.

- Advertisement -

Related news

error: Content is protected !!