Sunday, July 6, 2025
spot_imgspot_img
spot_imgspot_img

ಸುಬ್ರಹ್ಮಣ್ಯ: ಅತಿಥಿಯಾಗಿ ಬಂದವ ಮಾಡಿದ್ದು ಅದೆಂತಾ ಕೃತ್ಯ ಗೊತ್ತಾ..! ಟ್ಯಾಂಪಿಂಗ್ ಮಾಡುವ ಕತ್ತಿಯಿಂದ ಮಾರಣಾಂತಿಕ ಹಲ್ಲೆ

- Advertisement -
- Advertisement -

ಸುಬ್ರಹ್ಮಣ್ಯ: ಅತಿಥಿಯಾಗಿ ಬಂದ ವ್ಯಕ್ತಿ ಮನೆ ಯಜಮಾನಿಗೆ ಚೂರಿ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು ಎಂಬಲ್ಲಿ ಈ ಕೃತ್ಯ ನಡೆದಿದೆ.

ಕೇರಳ ಮೂಲದ ಲೂಕೋಸ್ ಎಂಬವರು ಎಂಟು ವರ್ಷಗಳ ಹಿಂದೆ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು ಎಂಬಲ್ಲಿ ಜಾಗ ಖರೀದಿಸಿ ಸಂಸಾರ ಸಮೇತರಾಗಿ ವಾಸವಾಗಿದ್ದರು. ಆದರೆ ಕಳೆದ ಎರಡು ವರ್ಷದ ಹಿಂದೆ ಪತ್ನಿ ಬಿಟ್ಟು ಹೋಗಿದ್ದು, ಒಬ್ಬಂಟಿಯಾಗಿ ಜೀವಿಸುತ್ತಿದ್ದರು. ವಾರದ ಹಿಂದೆ ಲೂಕೋಸ್ ಅವರ ಮನೆಗೆ ಅತಿಥಿಯೊಬ್ಬ ಬಂದಿದ್ದು, ಇವರ ಮನೆಯಲ್ಲೇ ವಾಸವಾಗಿದ್ದ. ನಿನ್ನೆ (ಶನಿವಾರ) ಮುಂಜಾನೆ ವೇಳೆ ಗುತ್ತಿಗಾರಿಗೆ ತೆರಳಿದ್ದು, ಬಳಿಕ ಮನೆಗೆ ವಾಪಸ್ ಆಗಿದ್ದರು.

ನಿನ್ನೆ ಮಧ್ಯಾಹ್ನ 3-4 ಗಂಟೆ ವೇಳೆಗೆ ಮನೆಗೆ ಬಂದಿದ್ದಾತ ರಬ್ಬರ್ ಟ್ಯಾಂಪಿಂಗ್ ಮಾಡುವ ಕತ್ತಿಯಿಂದ ಲೂಕೋಸ್ ಅವರಿಗೆ ನಾಲೈದು ಬಾರಿ ಇರಿದಿದ್ದು, ಬಳಿಕ ಪರಾರಿಯಾಗಿದ್ದಾನೆ.

ಗಾಯಗೊಂಡ ಲೂಕೋಸ್ ಪಕ್ಕದ ಮನೆಗೆ ಓಡಿಹೋಗಿದ್ದು, ಗಾಯಗೊಂಡಿದ್ದ ಆತ ಅಲ್ಲೇ ಕುಸಿದು ಬಿದ್ದಿದ್ದ. ನಂತರ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ, ಕೂಡಲೇ ಸುಬ್ರಹ್ಮಣ್ಯ ಠಾಣಾಧಿಕಾರಿ ಜಂಬುರಾಜ್ ಮಹಾಜನ್ ಅವರು ಯುವ ತೇಜಸ್ಸು ಆಂಬ್ಯುಲೆನ್ಸ್ ಜೊತೆ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಗಾಯಾಳು ಲೂಕೋಸ್ ಅವರನ್ನು ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಾರಿಯಾದ ಆರೋಪಿ ಪತ್ತೆಗೆ ಪೋಲಿಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!