Tuesday, May 21, 2024
spot_imgspot_img
spot_imgspot_img

ಸುಬ್ರಹ್ಮಣ್ಯ: ಷಷ್ಠಿಯಂದು ವ್ಯಾಪಾರ ನಡೆಸುತ್ತಿದ್ದ ಯುವಕನಿಗೆ ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿ; ಹಿಂದೂ ಪರ ಸಂಘಟನೆಯಿಂದ ಸುಬ್ರಹ್ಮಣ್ಯ ಠಾಣಾ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

- Advertisement -G L Acharya panikkar
- Advertisement -

ಕಡಬ: ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ನಡೆಸುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಠಾಣೆಯ ಪೋಲಿಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ಹಲ್ಲೆಗೊಳಗಾದ ಯುವಕ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಯುವಕನಿಕೆ ಪೊಲೀಸ್ ಸಿಬಂದಿ ಹಣ ನೀಡುವಂತೆ ಒತ್ತಾಯಿಸಿ, ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಕುಟ್ರುಪಾಡಿ ಗ್ರಾಮದ ಭೀಮಗುಂಡಿ ನಿವಾಸಿ ಶಶಿಕಿರಣ್ ಎಂಬವರು ಪೋಲಿಸ್ ಸಿಬ್ಬಂದಿಯಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಯುವಕನಾಗಿದ್ದಾನೆ.

ಈ ಬಗ್ಗೆ ಹೇಳಿಕೆ ನೀಡಿರುವ ಶಶಿಕಿರಣ್ ಅವರು ಚಂಪಾಷಷ್ಠಿಯಂದು ನಾನು ಜ್ಯೂಸ್ ಐಸ್ ಕ್ರೀಂ ವ್ಯಾಪಾರ ಮಾಡುತ್ತಿದ್ದು, ಪಂಚಮಿಯ ರಾತ್ರಿ 12 ಗಂಟೆ ಸುಮಾರಿಗೆ ಸ್ಟಾಲಿಗೆ ಬಂದ ಪೋಲಿಸ್ ಕಾನ್ಸ್‌ಟೇಬಲ್ ಭೀಮಣ್ಣ ಹಣ ನೀಡುವಂತೆ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಪೋಲಿಸ್ ಸಿಬ್ಬಂದಿಗೆ ನಾನು ಹೆದರಿ 1000 ನೀಡಿದ್ದೇನೆ. ಈ ಹಣ ಸಾಕಾಗುವುದಿಲ್ಲ 5000 ನೀಡುವಂತೆ ಬೆದರಿಸಿದ್ದು ಅಷ್ಟು ಹಣ ನೀಡದಿದ್ದಾಗ ನನ್ನನ್ನು ಠಾಣೆಯ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಹಿತಿ ಪಡೆದ ಹಿಂದೂ ಪರ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು ಆಸ್ಪತ್ರೆಗೆ ಭೇಟಿ ಯುವಕನಲ್ಲಿ ಮಾಹಿತಿ ಪಡೆದಿದ್ದು ತಪ್ಪಿತಸ್ಥ ಪೊಲೀಸ್ ಸಿಬಂದಿ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಒಂದು ವೇಳೆ ಹಿರಿಯ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

- Advertisement -

Related news

error: Content is protected !!