Friday, April 26, 2024
spot_imgspot_img
spot_imgspot_img

ಸುರತ್ಕಲ್ : ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ; ನಜ್ಜುಗುಜ್ಜಾದ ಕಾರು

- Advertisement -G L Acharya panikkar
- Advertisement -

ಸುರತ್ಕಲ್ : ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಕಾರೊಂದು ನಿಯಂತ್ರಣ ತಪ್ಪಿ ಹೋಟೆಲ್ ಮುಂಭಾಗದ ಹೋಡಿಂಗ್, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಘಟನೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷಿತ ನಗರ ಜಂಕ್ಷನ್ ಬಳಿ ನಡೆದಿದೆ.

ಆಸ್ಪತ್ರೆಯೊಂದರ ವೈದ್ಯ ಹಾಗೂ ಮತ್ತೊಬ್ಬರು ಆ ಕಾರಿನಲ್ಲಿದ್ದರು. ಅಪಘಾತದ ಪರಿಣಾಮ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿರುದ್ಧ ದಿಕ್ಕಿನಿಂದ ಸುಭಾಷಿತನಗರ ಕಡೆಗೆ ಹೋಗಲು ಕಾರು ಚಾಲಕ ಏಕಾಏಕಿ ಹೆದ್ದಾರಿಗೆ ನುಗ್ಗಿದ್ದು, ಈ ವೇಳೆ ಉಡುಪಿ ಕಡೆಯಿಂದ
ಬರುತ್ತಿದ್ದ ಕ್ಯಾಂಟರ್ ಚಾಲಕ ಬಲಬದಿಗೆ ತಿರುಗಿಸಿದ್ದರಿಂದ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬೈಕಂಪಾಡಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!