Sunday, June 7, 2026
spot_imgspot_img
spot_imgspot_img

ಸುರತ್ಕಲ್ : ಗಾಂಜಾ ಸೇವನೆಯ ಅಮಲಿನಲ್ಲಿ ತಂಡದಿಂದ ತಲವಾರು ದಾಳಿ ; ರಿಕ್ಷಾ ಚಾಲಕನಿಗೆ ಗಾಯ

- Advertisement -
- Advertisement -

ಸುರತ್ಕಲ್ : ಇಲ್ಲಿನ ಚಿತ್ರಾಪುರ ಸಮೀಪದ ಪಣಂಬೂರು ಮೊಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ನಡೆದಿದೆ.

ಗಾಂಜಾ ಸೇವಿಸಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದು , ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಿಕ್ಷಾ ಪುಡಿಗೈಯಲಾಗಿದೆ. ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಸ್ಥಳೀಯರ ಸಹಕಾರದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೋರ್ವ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ.

ಕಡಲು ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಕಳೆದ ಹಲವು ತಿಂಗಳಿನಿಂದ ಮಾದಕ ವ್ಯಸನಿಗಳು ಅನೈತಿಕ ಚಟುವಟಿಕೆ ನಡೆಸುತ್ತಿದ್ದು, ಈ ಕುರಿತು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ಇದೇ ದ್ವೇಷದಿಂದ ಈ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!