Friday, July 24, 2026
spot_imgspot_img
spot_imgspot_img

ಸುರತ್ಕಲ್, ಬಜಪೆ, ಕಾವೂರು, ಪಣಂಬೂರಿನಲ್ಲಿ ನಿಷೇಧಾಜ್ಞೆ ಜಾರಿ

- Advertisement -
- Advertisement -

ಮಂಗಳೂರು: ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದ ಫ್ಯಾನ್ಸಿ ಸ್ಟೋರ್ ಮಾಲಕ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಬಜಪೆ ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಹಾಗೂ ಮದ್ಯ ಮಾರಾಟ ನಿಷೇಧ ಜಾರಿಗೊಳಿಸಲಾಗಿದೆ.

ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಡಿ.25 ರ ಬೆಳಗ್ಗೆ 6 ಗಂಟೆಯಿಂದ ಡಿ.27 ರ ಬೆಳಗ್ಗೆ 6 ಗಂಟೆಯವರೆಗೆ ಅನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ.

ಈ ನಿಷೇಧಾಜ್ಞೆ ಕ್ರಿಸ್ ಮಸ್ ಆಚರಣೆ/ ತುರ್ತು ಸೇವೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ.

ಇದಲ್ಲದೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುವ ಹಿನ್ನಲೆಯಲ್ಲಿ ಮದ್ಯ ಸೇವಿಸಿ ಸಮಾಜ ಘಾತಕ ವ್ಯಕ್ತಿಗಳು ಸಾರ್ವಜನಿಕ ಸ್ವತ್ತು ನಾಶ , ಹಲ್ಲೆ ಹಾಗೂ ದುಂಬಿ ನಡೆಸುವ ಸಾಧ್ಯತೆ ಇರೋದ್ರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಮುಂಜಾಗ್ರತ ಕ್ರಮವಾಗಿ ಉಂಟು ಮಾಡಿ ಮಧ್ಯ ಮಾರಾಟ ನಿಷೇಧಿಸುವುದಾಗಿ ಸುರತ್ಕಲ್, ಬಜಪೆ ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಇದಲ್ಲದೆ ಸೆಕ್ಷನ್ ಜಾರಿ ಇರುವ ಪ್ರದೇಶದಲ್ಲಿನ ಎಲ್ಲಾ ಕೈಗಾರಿಕೆ ಹಾಗೂ ವಾಣಿಜ್ಯ ಸಂಕೀರ್ಣಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳ ಕರ್ತವ್ಯ ಪಾಳಿಯನ್ನು ಸಂಜೆ 6ಗಂಟೆಗೆ ಒಳಗಾಗಿ ಬದಲಾಯಿಸುವಂತೆ ಹಾಗೂ ಸಂಜೆ 6 ಗಂಟೆಯಿಂದ ಬೆಳಗ್ಗೆ 6:00 ವರೆಗೆ ಸಿಬ್ಬಂದಿಗಳು ರಸ್ತೆಗಳಲ್ಲಿ ಸಂಚರಿಸದಂತೆ ಸೂಚಿಸಲಾಗಿದೆ.

- Advertisement -

Related news

error: Content is protected !!