Wednesday, May 8, 2024
spot_imgspot_img
spot_imgspot_img

ಸುರತ್ಕಲ್ : ಮಗುವಿನ ಅಪಹರಣಕ್ಕೆ ಯತ್ನ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

- Advertisement -G L Acharya panikkar
- Advertisement -

ಸುರತ್ಕಲ್: ಚೊಕ್ಕಬೆಟ್ಟು ಎಂಬಲ್ಲಿ ಮನೆಯ ಮುಂದೆ ನಿಂತಿದ್ದ ಮಗುವನ್ನು ಅಪಹರಿಸಲು ಯತ್ನಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸುರತ್ಕಲ್‌ನಾದ್ಯಂತ ಸೋಮವಾರ ರಾತ್ರಿ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಚೊಕ್ಕಬೆಟ್ಟು ಮಸೀದಿಯ ಪಕ್ಕದ ಮನೆಯ ಮುಂದೆ ಮಗು ಆಟವಾಡುತ್ತಿತ್ತು. ಅಲ್ಲಿಗೆ ಬಂದ ವ್ಯಕ್ತಿಯೋರ್ವ ಮಗುವಿನ ಕೈ ಹಿಡಿದು ಎಳೆದು ಅಪಹರಣಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಗು ಆತನ‌ ಕೈಯಿಂದ ತಪ್ಪಿಸಿಕೊಂಡು ಮನೆಗೆ ಓಡಿ ಹೋಗಿದೆ.

ಈ ವೇಳೆ ಅಪಹರಣಕ್ಕೆ ಯತ್ನಿಸಿದವ ಪರಾರಿಯಾಗಿದ್ದಾನೆ‌. ಇನ್ನು ದುಷ್ಕರ್ಮಿಯ ಕೃತ್ಯ ಮಸೀದಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಸುರತ್ಕಲ್‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ‌.

- Advertisement -

Related news

error: Content is protected !!