Friday, July 24, 2026
spot_imgspot_img
spot_imgspot_img

ಸುಳ್ಯ: ಅಪ್ರಾಪ್ತೆಯನ್ನು ಅತ್ಯಾಚಾರ ಎಸಗಿದ ಆರೋಪ; ಎಫ್‌ಐಆರ್ ದಾಖಲು

- Advertisement -
- Advertisement -

ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿರುವ ಪ್ರಕರಣ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈಕೆ ಸುಬ್ರಹ್ಮಣ್ಯದ ಕಾಲೋಜೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು ಎನ್ನಲಾಗಿದೆ.

ಈಕೆಯನ್ನು ಪರಿಚಯದ ಯುವಕನೊಬ್ಬ ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಪ್ರಾಪ್ತ ಬಾಲಕಿಯ ತಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಯುವಕನ ವಿರುದ್ಧ ಫೋಕ್ಸೊ ಪ್ರಕರಣದಡಿ ಕೇಸು ದಾಖಲಾಗಿದೆ. ಯುವತಿಯನ್ನು ಅತ್ಯಾಚಾರ ಮಾಡಿದ ಯುವಕ ಕಲ್ಮಡ್ಕ ಮೂಲದವನು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!