Saturday, April 20, 2024
spot_imgspot_img
spot_imgspot_img

ಸುಳ್ಯ: ಕಾರು ಪಲ್ಟಿಯಾಗಿ ರೆಡ್’ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅನ್ಯಕೋಮಿನ ಜೋಡಿ..! ಹಿಂದೂ ಕಾರ್ಯಕರ್ತರ ವಿರುದ್ಧ ದೂರು ದಾಖಲು

- Advertisement -G L Acharya panikkar
- Advertisement -

ಸುಳ್ಯ ಸಮೀಪ ನಾಗಪಟ್ಟಣ ಎಂಬಲ್ಲಿ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಅದರಲ್ಲಿದ್ದ ಅನ್ಯಕೋಮಿನ ಜೋಡಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ನಡೆದಿದೆ.

ಈ ವೇಳೆ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಯ ಮೇಲೆ ಹಲ್ಲೆ ನಡೆಸಲು ಬಂದ ಆರೋಪದಲ್ಲಿ ಹಿಂದೂ ಸಂಘಟನೆಯ ನಾಲ್ಕು ಮಂದಿ ಕಾರ್ಯಕರ್ತರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಫೆಬ್ರವರಿ 8ರಂದು ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ಮುಸ್ಲಿಂ ಯುವಕ ಮತ್ತು ಯುವತಿ ಕೇರಳದ ಬಂದಡ್ಕ ಕಡೆಯಿಂದ ಕಾರಿನಲ್ಲಿ ಕೋಲ್ಚಾರು ಮಾರ್ಗವಾಗಿ ಬರುತ್ತಿದ್ದ ವೇಳೆ ಕಾರು ಪಲ್ಟಿಯಾಗಿದೆ. ಲವ್ ಜಿಹಾದ್ ಶಂಕೆಯಿಂದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಾರನ್ನು ಹಿಂಬಾಲಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಅಪಘಾತವಾದ ಸಂದರ್ಭದಲ್ಲೇ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಅನ್ಯಕೋಮಿನ ಜೋಡಿ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದೀಗ ಹಿಂದೂ ಸಂಘಟನೆಯ ನಾಲ್ಕು ಮಂದಿ ಕಾರ್ಯಕರ್ತರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!