Friday, August 7, 2026
spot_imgspot_img
spot_imgspot_img

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಬಸ್; ಒಬ್ಬರಿಗೆ ಗಾಯ

- Advertisement -
- Advertisement -

ಸುಳ್ಯ: ಕಾಸರಗೋಡಿನಿಂದ ಸುಳ್ಯಕ್ಕೆ ಬರುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆಯ ಬಸೊಂದು ಅಪಘಾತಕ್ಕೀಡಾದ ಘಟನೆ ಸುಳ್ಯ ಜಾಲ್ಕೂರು ಗ್ರಾಮದ ಅಡಾರು ಮಾವಿನಕಟ್ಟೆಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ತೋಟಕ್ಕೆ ನುಗ್ಗಿದೆ. ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಗಾಯಾಳು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ಅಪಘಾತವಾಗುವ ಸಂದರ್ಭದಲ್ಲಿ ಕೆಲವೇ ಕೆಲವು ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!