Thursday, April 25, 2024
spot_imgspot_img
spot_imgspot_img

ಸುಳ್ಯ: ಡೆತ್ ನೋಟ್ ಬರೆದಿಟ್ಟು ಅವಿನಾಶ್ ಮೋಟರ್ಸ್ ಮಾಲಕ ನಾರಾಯಣ ರೈ ಆತ್ಮಹತ್ಯೆ..!

- Advertisement -G L Acharya panikkar
- Advertisement -
vtv vitla
vtv vitla
vtv vitla

ಸುಳ್ಯ: ಡೆತ್ ನೋಟ್ ಬರೆದು ಬಸ್ ಮಾಲಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ಸಂಭವಿಸಿದೆ.

ಬಸ್ ಸೌಲಭ್ಯ ಇಲ್ಲದಂತಹ ಸಂದರ್ಭದಲ್ಲಿ ಸುಳ್ಯದ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯ ಕಲ್ಪಿಸಿದ್ದ ಸಂಪರ್ಕ ಕ್ರಾಂತಿಯ ಹರಿಕಾರ ಅವಿನಾಶ್ ಮೋಟರ್ಸ್ ಮಾಲಕ ನಾರಾಯಣ ರೈ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತ್ನಿ ಮಕ್ಕಳು ವಿವಾಹ ಸಮಾರಂಭಕ್ಕಾಗಿ ಬೆಂಗಳೂರಿಗೆ ತೆರಳಿದ್ದು, ಅರಂತೂರಿನ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

vtv vitla

ರಾತ್ರಿ 11.45 ರ ಸುಮಾರಿಗೆ ತನ್ನ ತಂಗಿಗೆ ವಾಟ್ಸಾಪ್‌ನಲ್ಲಿ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತದೇಹದ ಪಕ್ಕದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಅನಾರೋಗ್ಯದ ಹಿನ್ನಲೆಯಲ್ಲಿ ತನಗೆ ಬದುಕಲು ಕಷ್ಟವಾಗುತ್ತಿದ್ದೂ ಯಾರಿಗೂ ತೊಂದರೆ ನೀಡಲು ಮನಸ್ಸಿಲ್ಲದೆ ನಿಮ್ಮನ್ನೆಲ್ಲಾ ಬಿಟ್ಟು ಹೋಗುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ ಎನ್ನಲಾಗಿದೆ.

ತನ್ನ ಸಾವಿನ ಕಾರಣಕ್ಕೆ ಬಸ್‌ಗಳ ಓಡಾಟವನ್ನು ನಿಲ್ಲಿಸಬಾರದು. ಕಪ್ಪು ಫ್ಲ್ಯಾಗ್ ಹಾಕಿ ಬಸ್ ಓಡಿಸಬೇಕು ಎಂದು ಡೆತ್‌ನೋಟ್ ಉಲ್ಲೇಖಿಸಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!