- Advertisement -
- Advertisement -

ಸುಳ್ಯ: ದ.ಕ ಜಿಲ್ಲೆಯಲ್ಲಿ ಸದ್ಯದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮಸೂದ್, ಪ್ರವೀಣ್ ನೆಟ್ಟಾರು, ಫಾಝಿಲ್ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಹೀಗಿದ್ದರೂ ಸುಳ್ಯ ತಾಲೂಕಿನ ಕನಕಮಜಲಿನಲ್ಲಿ ಸಂದೀಪ್ ಎಂಬ ಯುವಕನೋರ್ವ ತಲ್ವಾರ್ ಹಿಡಿದು ಊರಿಡೀ ಸುತ್ತಾಡಿ ಹುಚ್ಚಾಟ ಮೆರೆದ ಘಟನೆ ನಡೆದಿದೆ.


ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಬ್ಯಾನರ್ ಅಳವಡಿಸುವ ವೇಳೆ ಪ್ಲಾಸ್ಟಿಕ್ ಬ್ಯಾನರ್ ಬಳಸದಂತೆ ಗ್ರಾಮ ಪಂಚಾಯತ್ ನಿಂದ ತಿಳಿಸಲಾಗಿತ್ತು, ಆದರೆ ಸಂದೀಪ್ ಮತ್ತು ಕೆಲವರು ಪ್ಲಾಸ್ಟಿಕ್ ಬ್ಯಾನರ್ ಅಳವಡಿಸಿದ್ದರು. ಇದನ್ನು ಪಂಚಾಯತ್ ನಿರ್ದೇಶನದಂತೆ ತೆರವುಗೊಳಿಸಲಾಗಿದ್ದು, ಇದರಿಂದ ಕೋಪಗೊಂಡ ಸಂದೀಪ್ ಎಂಬಾತ ತಲ್ವಾರ್ ಪುದರ್ಶಿಸಿದ್ದಾನೆ ಎನ್ನಲಾಗಿದೆ.
- Advertisement -








