Friday, May 3, 2024
spot_imgspot_img
spot_imgspot_img

ಸುಳ್ಯ: ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆಯ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ; ಸ್ಥಿತಿ ಗಂಭೀರ

- Advertisement -G L Acharya panikkar
- Advertisement -

ಸುಳ್ಯ: ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆಯ ಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.

ಗುಂಡು ಹಾರಿಸಿಕೊಂಡವರನ್ನು ಸುಳ್ಯ ನಗರ ಪಂಚಾಯತ್‌ ನ ಮಾಜಿ ಉಪಾಧ್ಯಕ್ಷರಾದ ಶಾಂತಿ ಪ್ರಭುರವರ ಪತಿ ಎನ್ನಲಾಗಿದೆ. ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಎಂಬುವವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಈ ಘಟನೆಯು ಇಂದು ಪೂರ್ವಾಹ್ನ 11 ಗಂಟೆಯ ಸುಮಾರಿಗೆ ನಡೆದಿದೆ, ಅವರು ವಾಸವಿದ್ದ ಮನೆಯಲ್ಲಿಯೇ ಈ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗುಂಡು ಹಾರಿಸಿಕೊಳ್ಳಲು ಕಾರಣವೇನೆಂದು ಇನ್ನೂ ಗೊತ್ತಾಗಿಲ್ಲ.

- Advertisement -

Related news

error: Content is protected !!