Thursday, March 28, 2024
spot_imgspot_img
spot_imgspot_img

ಸೆ. 27ರಂದು `ಭಾರತ್ ಬಂದ್’

- Advertisement -G L Acharya panikkar
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಒಕ್ಕೂಟ ಕಿಸಾನ್ ಮೋರ್ಚಾ ಸೆ.27 ರಂದು ಭಾರತ್ ಬಂದ್ ಗೆ ಕರೆ ನೀಡಿದೆ.

ದೇಶದಾದ್ಯಂತ ಪ್ರಮುಖ 500 ಕ್ಕೂ ಹೆಚ್ಚು ರೈತಪರ ಸಂಘಟನೆಗಳು ಪ್ರತಿಭಟನೆ, ಧರಣಿ, ಮೆರವಣಿಗೆ ನಡೆಸಲಿವೆ ಎಂದು ತಿಳಿದು ಬಂದಿದೆ. ಬೆಂಗಳೂರು ಮತ್ತು ರಾಜ್ಯದ ಇತರೆ ಪ್ರಮುಖ ಜಿಲ್ಲೆಗಳಲ್ಲಿಯೂ ಸಂಘಟನೆಗಳು ಮೆರವಣಿಗೆ ಹಮ್ಮಿಕೊಂಡಿದ್ದು, ಸಹಜವಾಗಿ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸೆ. 27 ರ ಭಾರತ್ ಬಂದ್ ಗೆ ಹೋಟೆಲ್, ಸಾರಿಗೆ, ಲಾರಿ ಮಾಲೀಕರು ನೈತಿಕ ಬೆಂಬಲ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಬಸ್, ಟ್ಯಾಕ್ಸಿ ಸೇವೆ, ಹೋಟೆಲ್ ಸೇವೆ ಸೇರಿದಂತೆ ನಾನಾ ಸೇವೆಗಳು ಎಂದಿನ0ತಿರುತ್ತವೆ. ಬಂದ್ ಹಿನ್ನೆಲೆಯಲ್ಲಿ ಹಾಲು, ತರಕಾರಿ, ಮೆಡಿಕಲ್ ಹೀಗೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎನ್ನಲಾಗಿದೆ. ಕೋವಿಡ್‌ನಿಂದಾಗಿ ಹೋಟೆಲ್ ಉದ್ಯಮ ಸಂಪೂರ್ಣ ಸಂಕಷ್ಟದಲ್ಲಿದ್ದು, ಹೋಟೆಲ್ ಸೇವೆಯಲ್ಲಿ ರೈತ ಉತ್ಪನ್ನಗಳನ್ನು ಬಳಸುವ ಮೂಲಕ ರೈತರಿಗೆ ಬೆಂಬಲ ಸೂಚಿಸಿದ್ದಾರೆ.

ಕೆಎಸ್‌ಆರ್ ಟಿಸಿ ಬಸ್ ಸೇವೆ ಎಂದಿನ0ತೆ ಮುಂದುವರಿಯುತ್ತದೆ. ಒಂದು ವೇಳೆ ಅಂದು ಪರಿಸ್ಥಿತಿ ಕ್ಲಿಷ್ಟಕರವಾಗಿದ್ದರೆ ಸೇವೆ ಸ್ಥಗಿತಗೊಳಿಸುತ್ತೇವೆ ಎಂದು ಕೆಎಸ್‌ಆರ್‌ಟಿಸಿ ನೌಕರರ ಒಕ್ಕೂಟದ ಅಧ್ಯಕ್ಷ ಆರ್. ಚಂದ್ರಶೇಖರ್ ತಿಳಿಸಿದ್ದಾರೆ.

driving
- Advertisement -

Related news

error: Content is protected !!