Saturday, May 18, 2024
spot_imgspot_img
spot_imgspot_img

ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆಗೆ ಸಚಿವರ ಸೂಚನೆ; ತಪ್ಪಿದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಸಚಿವ ಅಂಗಾರ

- Advertisement -G L Acharya panikkar
- Advertisement -

ಮಂಗಳೂರು: ಕೋವಿಡ್-19 ಸೋಂಕು ಹೆಚ್ಚು ಕಂಡುಬರುವ ಪ್ರದೇಶಗಳಲ್ಲಿ ಸಂಬಂಧಿಸಿದ ಆಯಾ ತಾಲೂಕುಗಳ ಆರೋಗ್ಯಾಧಿಕಾರಿಗಳು ಹೆಚ್ಚಿನ ತಪಾಸಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಈ ನಿರ್ದೇಶನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ತಿಳಿಸಿದರು.

ಸೆ. 6ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ನಿರ್ಬಂಧಗಳ ಕುರಿತು ಚರ್ಚಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೊರೋನಾ ಸೋಂಕು ನಿಯಂತ್ರಿಸುವಿಕೆಯಲ್ಲಿ ಹೆಚ್ಚಿನ ತಪಾಸಣೆ ಅತಿ ಅಗತ್ಯ. ಈ ದಿಸೆಯಲ್ಲಿ ಜಿಲ್ಲಾ ಹಾಗೂ ತಾಲೂಕುಗಳ ಆರೋಗ್ಯ ಅಧಿಕಾರಿಗಳು, ಹಿರಿಯ ವೈದ್ಯಾಧಿಕಾರಿಗಳು ಕೋವಿಡ್ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆಯನ್ನು ತುರ್ತಾಗಿ ನಡೆಸಬೇಕು, ಇಲ್ಲಿ ನಿರ್ಲಕ್ಷ್ಯ ಮಾಡಬಾರದು, ಮಾಡಿದ್ದಲ್ಲಿ ಸಂಬಂಧಿಸಿದ ತಾಲೂಕುಗಳ ಆರೋಗ್ಯಾಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಅವರು ನೀಡಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಮಾತನಾಡಿ, ಸಚಿವರ ಸೂಚನೆಯಂತೆ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆ ಮಾಡಬೇಕು, ಅದನ್ನು ಶೇ.100 ರಷ್ಟು ಕಾರ್ಯಗತಗೊಳ್ಳಬೇಕು, ಇದನ್ನು ತಹಶಿಲ್ದಾರ್ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳು ಮೇಲುಸ್ತುವಾರಿ ಮಾಡಬೇಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಗ್ರಾಮ ಮಟ್ಟದಲ್ಲಿರುವ ಕೋವಿಡ್ ಪಾಸಿಟಿವಿಟಿ ಸೂಚ್ಯಂಕದ ಬಗ್ಗೆ ಸಂಬಂಧಿಸಿದ ಆರೋಗ್ಯಾಧಿಕಾರಿಗಳು ಪಟ್ಟಿ ಒದಗಿಸುವಂತೆ ಅವರು ಸೂಚಿಸಿದರು.

- Advertisement -

Related news

error: Content is protected !!