Thursday, May 2, 2024
spot_imgspot_img
spot_imgspot_img

ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಆಗ್ರಹಿಸಿ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ; ಬಿಗಿ ಪೊಲೀಸ್ ಬಂದೋಬಸ್ತ್- ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಭಾಗಿ

- Advertisement -G L Acharya panikkar
- Advertisement -

ಸುಳ್ಯ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾದ ಮೂಲಕ ಪ್ರತಿಭಟನೆ ಆರಂಭಗೊಂಡಿದೆ.

ಈ ಹಿಂದೆ ಸುಳ್ಯದ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೌಜನ್ಯ ಹೋರಾಟ ಸಮಿತಿಯ ವಸಂತ್ ಮಾತನಾಡಿ, ಸೌಜನ್ಯಳ ಹತ್ಯೆ ನಡೆದು ೧೧ ವರ್ಷವಾಗಿದೆ. ನಿರಪರಾಧಿಯನ್ನು ಅಪರಾಧಿ ಮಾಡಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯದ ಕಣ್ಣಿಗೆ ಮಣ್ಣೆರಚುವ ಕೆಲಸ ಆಗಿದೆ. ಈ ಕೂಡಲೇ ಸೌಜನ್ಯ ಹತ್ಯೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕಿದೆ ಎಂದು ಒತ್ತಾಯಿಸಿದ್ದರು.

ಇಂದು ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಸೇರಿಸಿಕೊಂಡು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾ ಮೂಲಕ ಸುಮಾರು ೫೦೦ಕ್ಕೂ ಹೆಚ್ಚು ಬೈಕ್, ಕಾರು ವಾಹನಗಳಲ್ಲಿ ಜಾಥಾ ಮೂಲಕ ಪ್ರತಿಭಟನೆ ಪ್ರಾರಂಭಗೊಂಡಿದೆ. ಸುಳ್ಯ ಪೇಟೆಯಲ್ಲಿ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಮಂದಿ ನ್ಯಾಯಪರ ಹೋರಾಟಗಾರರು ಸಂಘಟಿತರಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ.

- Advertisement -

Related news

error: Content is protected !!