Saturday, May 4, 2024
spot_imgspot_img
spot_imgspot_img

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ಜಿಲ್ಲಾ ಸಂಘಟನೆಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

- Advertisement -G L Acharya panikkar
- Advertisement -

32 ವರ್ಷಗಳ ಸುಧೀರ್ಘ ಇತಿಹಾಸವನ್ನು ಹೊಂದಿರುವ ವೃತ್ತಿಪರ ಛಾಯಾಗ್ರಾಹಕರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಛಾಯಾಗ್ರಾಹಕರ ಹಿತರಕ್ಷಣೆಗಾಗಿ ಕೆಲಸ ಮಾಡಿಕೊಂಡು, ಸಾಮಾಜಿಕವಾಗಿಯೂ ಹಲವಾರು ತನ್ನ ಕೆಲಸಗಳಿಂದ ಮನೆ ಮಾತಾಗಿರುವ ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಛಾಯಾಗ್ರಾಹಕರನ್ನು ಸಂಘಟಿತರನ್ನಾಗಿಸಿ ರಾಜ್ಯದಲ್ಲೇ ಅತ್ಯುತ್ತಮ ಛಾಯಾಗ್ರಾಹಕ ಸಂಘಟನೆ ಎನ್ನುವ ಹೆಸರನ್ನು ಪಡೆದುಕೊಂಡಿರುವ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ ಸಂಘಟನೆಗೆ 2022 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ.

32 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಸರಕಾರದ ಮಟ್ಟದಲ್ಲಿ ಈ ಸಂಘಟನೆಯನ್ನು ಈ ಪ್ರಶಸ್ತಿಗೆ ಗುರುತಿಸಿ, ಗೌರವಿಸಿದ್ದು ಸಂಘಟನೆಯ ನಾಲ್ಕು ಸಾವಿರಕ್ಕೂ ಅಧಿಕ ಸದಸ್ಯರಿಗೆ ಸಂದ ಗೌರವವಾಗಿದೆ ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್, ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಆನಂದ್ ಎನ್ ಬಂಟ್ವಾಳ ರವರು ತಿಳಿಸಿದ್ದಾರೆ.

- Advertisement -

Related news

error: Content is protected !!