- Advertisement -
- Advertisement -


ಇತ್ತೀಚೆಗಷ್ಟೇ ಉಡುಪಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ ಕಾರಣಕ್ಕೆ ಅವರನ್ನು ತರಗತಿಯಿಂದ ಹೊರ ಹಾಕಲಾಗಿತ್ತು. ಈ ವಿಚಾರ ಎಲ್ಲೆಡೆ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಇದೀಗ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುತ್ತಾರೆ ಎಂದು ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಲ್ಯ ಧರಿಸಿಕೊಂಡು ಕಾಲೇಜಿಗೆ ಆಗಮಿಸಿದ ಘಟನೆ ಸೋಮವಾರ ನಡೆದಿದೆ.

ಈ ಹಿಂದೆಯೂ ಇಲ್ಲಿ ಇಂತಹದ್ದೇ ವಿವಾದಗಳು ನಡೆದಿದ್ದು, ಈ ವೇಳೆ ಪೋಷಕರು, ಪ್ರಾಂಶುಪಾಲರು ಈ ವಿವಾದವನ್ನು ತಿಳಿಗೊಳಿಸಿದ್ದರು. ಆದರೆ, ಇದೀಗ ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಬರುತ್ತಾರೆ ಎನ್ನುವುದನ್ನು ವಿರೋಧಿಸಿ, ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆಂದು ವರದಿಯಾಗಿದೆ.


- Advertisement -