Friday, April 19, 2024
spot_imgspot_img
spot_imgspot_img

ಸ್ಯಾಂಡಲ್​ವುಡ್ ನ ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ!

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla
vtv vitla

ಸ್ಯಾಂಡಲ್​ವುಡ್ ಹಿರಿಯ ನಟ ಶಿವರಾಂ ಅವರಿಗೆ ಅಪಘಾತವಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಸ್ತುತ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೆರೆ ಹಳ್ಳಿಯ ಖಾಸಗಿ ಅಸ್ಪತ್ರೆಗೆ ಅವರು ದಾಖಲಾಗಿದ್ದಾರೆ.

3 ದಿನಗಳ ಹಿಂದೆ ಕಾರಿನಲ್ಲಿ ತೆರಳುವಾಗ ಅಪಘಾತವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ಮನೆಯಲ್ಲಿದ್ದ ವೇಳೆ ಶಿವರಾಂ ಅವರ ಸ್ಥಿತಿ ಮತ್ತೆ ಗಂಭೀರವಾಗಿದೆ. ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

vtv vitla

ಹಿರಿಯ ನಟ ಶಿವರಾಮ್ ಅವರ ಅರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಅವರ ಅರೋಗ್ಯದ ಬಗ್ಗೆ ಶಿವರಾಮ್ ಹಿರಿಯ ಪುತ್ರ ರವಿಶಂಕರ್ ಮಾಹಿತಿ ನೀಡಿದ್ದಾರೆ. ‘‘ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ನಂತರ ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮೊನ್ನೆ ರಾತ್ರಿ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದರು. ಆ ವೇಳೆ ರೂಂನಲ್ಲಿ ಬಿದ್ದ ಹಿನ್ನೆಲೆ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.

ಮೊನ್ನೆ ರಾತ್ರಿಯೇ ಅಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ್ದೆವು. ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಯಿತು. ವೈದ್ಯರು ಸರ್ಜರಿ ಮಾಡಬೇಕು ಎಂದು ಹೇಳಿದರು. ಅದ್ರೆ ನಮ್ಮ ತಂದೆಗೆ ವಯಸ್ಸಾದ ಹಿನ್ನೆಲೆ ಸರ್ಜರಿ ಮಾಡಲು ಆಗಿಲ್ಲ. ಸದ್ಯ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ಮುಂದು ವರೆದಿದೆ’’ ಎಂದು ರವಿಶಂಕರ್ ಹೇಳಿದ್ದಾರೆ.

vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!