Thursday, May 2, 2024
spot_imgspot_img
spot_imgspot_img

ಸ್ವಯಂ ವಿವಾಹವಾಗಲು ಹೊರಟ ಯುವತಿಗೆ ಎದುರಾಯ್ತು ಸಂಕಷ್ಟ

- Advertisement -G L Acharya panikkar
- Advertisement -

ತನ್ನನ್ನು ತಾನೇ ಮದುವೆಯಾಗುತ್ತೇನೆ ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನ ಮೂಡಿಸಿದ ಯುವತಿ ಕ್ಷಮಾಗೆ ಇದೀಗ ಸಂಕಷ್ಟ ಎದುರಾಗಿದ್ದು, ಬಿಜೆಪಿ ಮುಖಂಡರು ಕ್ಷಮಾ ಮದುವೆ ವಿರೋಧಿಸಿ ಆಕ್ರೋಶ ಹೊರಹಾಕಿದ್ದಾರೆ.

ವಡೋದರದ 24 ವರ್ಷದ ಕ್ಷಮಾ ಜೂನ್ 11 ರಂದು ಗೋತ್ರಿಯ ದೇವಸ್ಥಾನದಲ್ಲಿ ಐದು ವ್ರತಗಳನ್ನು ಮಾಡುವ ಮೂಲಕ ವಿವಾಹ ಮಾಡಿಕೊಳ್ಳುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಳು. ದೇವಸ್ಥಾನದಲ್ಲಿ ಮದುವೆ ಆಗುತ್ತಿರುವ ವಿಚಾರಕ್ಕೆ ಬಿಜೆಪಿ ನಗರ ಘಟಕದ ಉಪ ಮುಖ್ಯಸ್ಥೆ ಸುನೀತಾ ಶುಕ್ಲಾ ತೀವ್ರವಾಗಿ ವಿರೋಧ ವ್ಯಕ್ತಪಡಿದ್ದಾರೆ.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವಸ್ಥಾನದಲ್ಲಿ ಈ ರೀತಿಯ ಮದುವೆಗಳಿಗೆ ನಾವು ಅನುಮತಿ ನೀಡುವುದಿಲ್ಲ. ಇಂತಹ ವಿವಾಹಗಳು ಹಿಂದೂ ಧರ್ಮಕ್ಕೆ ವಿರುದ್ಧವಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತನ್ನನ್ನು ತಾನೇ ಮದುವೆಯಾಗಲಿರುವ ಯುವತಿ.! ದೇಶದ ಮೊದಲ ‘ಸ್ವಯಂ ವಿವಾಹ’ ಪ್ರಕರಣ

- Advertisement -

Related news

error: Content is protected !!