Thursday, July 10, 2025
spot_imgspot_img
spot_imgspot_img

ಹರ್ಷ ಹತ್ಯೆಯ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಸಿಎಂಗೆ ಪತ್ರ ಬರೆದ ಸಚಿವೆ ಶೋಭಾ ಕರಂದ್ಲಾಜೆ

- Advertisement -
- Advertisement -

ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಮುಖ್ಯಮಂತ್ರಿಗೆ ಪತ್ರಬರೆದು ಆಗ್ರಹಿಸಿದ್ದಾರೆ.

vtv vitla
vtv vitla

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವಂತ ಕರಂದ್ಲಾಜೆ, ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಸಂಬಂಧ ಸೂಕ್ತ ರೀತಿಯಲ್ಲಿ ತನಿಖೆ ನಡೆದು, ಆರೋಪಿಗಳಿಗೆ ಶಿಕ್ಷೆ ಆಗಬೇಕು. ಹರ್ಷ ಹತ್ಯೆ ಹಿಂದಿನ ಕಾಣದ ಕೈಗಳ ಬಗ್ಗೆ ತನಿಖೆ ನಡೆಸಲು ಎನ್‌ಐಎಗೆ ತನಿಖೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಭಜರಂಗದಳದ ಕಾರ್ಯಕರ್ತ ಹರ್ಷ ಶಿವಮೊಗ್ಗ ನಗರದಲ್ಲಿ ಭಾನುವಾರ ರಾತ್ರಿ ಹತ್ಯೆಯಾಗಿದ್ದು, ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸೋ ಮುನ್ನವೇ ಹರ್ಷ ಸಾವನ್ನಪ್ಪಿದ್ದರು.

- Advertisement -

Related news

error: Content is protected !!