Friday, April 26, 2024
spot_imgspot_img
spot_imgspot_img

ಹಲವು ಬೆಳವಣಿಗೆ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಉದ್ದವ್ ಠಾಕ್ರೆ

- Advertisement -G L Acharya panikkar
- Advertisement -
vtv vitla

ಮುಂಬೈ: ಭಾರೀ ಹೈಡ್ರಾಮಾದ ಬಳಿಕ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡಿದೆ. ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದ್ದಾರೆ.

ಗುರುವಾರ ಸುಪ್ರೀಂ ಕೋರ್ಟ್‌ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ‌ ನಾನು ಸಿಎಂ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದ್ಧವ್‌ ಠಾಕ್ರೆ ತಿಳಿಸಿದರು. ಸರ್ಕಾರ ರಚನೆಗೆ ಸಹಕಾರ ನೀಡಿದ್ದಕ್ಕೆ ಎನ್‌ಸಿಪಿ ಮತ್ತು ಕಾಂಗ್ರೆಸ್‌ಗೆ ಉದ್ಧವ್‌ ಠಾಕ್ರೆ ಧನ್ಯವಾದ ಹೇಳಿದರು.

ಗುರುವಾರ ಬೆಳಗ್ಗೆ 11 ಗಂಟೆಗೆ ಉದ್ಧವ್ ಸರ್ಕಾರ ವಿಶ್ವಾಸಮತ ಸಾಬೀತು ಪಡಿಸಬೇಕು ಎಂದು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಆದೇಶ ನೀಡಿದ್ದರು. ವಿಶೇಷ ಅಧಿವೇಶನ ಕರೆದು ಸಂಜೆ ಐದು ಗಂಟೆಯೊಳಗೆ ವಿಶ್ವಾಸಮತ ಪ್ರಕ್ರಿಯೆ ಮುಗಿಸುವಂತೆ ವಿಧಾನಸಭೆ ಕಾರ್ಯದರ್ಶಿಗೆ ಖಡಕ್ಕಾಗಿ ಆರ್ಡರ್ ಮಾಡಿದ್ದರು. ಆದರೆ ಅನರ್ಹತೆ ಪ್ರಕರಣ ಇತ್ಯರ್ಥವಾಗದೇ ಬಲಪರೀಕ್ಷೆಗೆ ಹೇಗೆ ಅವಕಾಶ ನೀಡಲಾಗ್ತಿದೆ ಎಂದು ಪ್ರಶ್ನಿಸಿ ಶಿವಸೇನೆ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಸಂಜೆ 5 ಗಂಟೆಯಿಂದ ವಿಚಾರಣೆ ಆರಂಭಿಸಿದ್ದ ಕೋರ್ಟ್‌ ರಾತ್ರಿ 8:30ಕ್ಕೆ ಮುಗಿಸಿತ್ತು.

ಸುಪ್ರೀಂಕೋರ್ಟ್ ರಾತ್ರಿ 9ಕ್ಕೆ ತನ್ನ ತೀರ್ಪು ಪ್ರಕಟಿಸಿ ಶಿವಸೇನೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿತ್ತು. ಈ ಆದೇಶದ ಬೆನ್ನಲ್ಲೇ ಉದ್ಧವ್‌ ಠಾಕ್ರೆ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

- Advertisement -

Related news

error: Content is protected !!