Saturday, July 5, 2025
spot_imgspot_img
spot_imgspot_img

ಹಾಸ್ಟೆಲ್‌ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ

- Advertisement -
- Advertisement -

ತಮಿಳುನಾಡು: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಶಾಲೆಯ 12ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಇಂದು ತನ್ನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಸರಳಾ ಎಂದು ಗುರುತಿಸಲಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದ್ದು, ಪ್ರಕರಣವನ್ನು ರಾಜ್ಯ ಪೊಲೀಸರ ಸಿಬಿ-ಸಿಐಡಿ ವಿಭಾಗಕ್ಕೆ ವರ್ಗಾಯಿಸಲಾಗಿದೆ ಎಂದು ತಿರುವಳ್ಳೂರಿನ ಪೊಲೀಸ್ ವರಿಷ್ಠಾಧಿಕಾರಿ ಸೆಫಾಸ್ ಕಲ್ಯಾಣ್ ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿನಿ ತಮಿಳುನಾಡಿನ ತಿರುಟ್ಟಣಿಯವರಾಗಿದ್ದು, ಯಾವುದೇ ಕಾನೂನು ಸುವ್ಯವಸ್ಥೆ ಹದಗೆಡದಂತೆ ಆಕೆಯ ಗ್ರಾಮದಲ್ಲಿಯೂ ಭದ್ರತೆಯನ್ನೂ ನಿಯೋಜಿಸಲಾಗಿದೆ.

ಇನ್ನು ಜುಲೈ 13ರಂದು ಕಲ್ಲಕುರಿಚಿ ಜಿಲ್ಲೆಯ ಮೆಟ್ರಿಕ್ಯುಲೇಷನ್ ಶಾಲೆಯ 12ನೇ ತರಗತಿಯ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡು ವಾರದಲ್ಲಿ ಎರಡನೇ ಘಟನೆ ಇದಾಗಿದೆ.

- Advertisement -

Related news

error: Content is protected !!