Thursday, April 25, 2024
spot_imgspot_img
spot_imgspot_img

ಇಂದಿನಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಆರಂಭ

- Advertisement -G L Acharya panikkar
- Advertisement -
vtv vitla

ಕೊರೋನಾ ಅವಧಿ ಬಳಿಕ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ಭೇಟಿ ಕೊಡುವ ಭಕ್ತರ ಸಂಖ್ಯೆ ಕೊರೊನಾ ಪೂರ್ವ ಅವಧಿಗೆ ಸಮವಾಗುತ್ತಿದೆ. ಮಂಗಳವಾರ ಶಬರಿಮಲೆಯಲ್ಲಿ ಧಾರ್ಮಿಕ ವಿಧಿಗಳು ಆರಂಭಗೊಂಡಿದ್ದು, ಬುಧವಾರ ದೇವಸ್ಥಾನದ ಬಾಗಿಲು ತೆರೆಯಲಾಗಿದ್ದು, ಭಕ್ತರಿಂದ ದರ್ಶನ ಆರಂಭವಾಗುತ್ತಿದೆ.

ಕರಾವಳಿಯಾದ್ಯಂತ ಕಾರ್ತಿಕ ಮಾಸದ ಸಂಕ್ರಮಣದಂದು (ಬುಧವಾರ) ಭಕ್ತರು ಮಾಲೆಯನ್ನು ಹಾಕುತ್ತಾರೆ. ಡಿ. 27ರಂದು ಮಂಡಲ ಪೂಜೆ ನಡೆಯಲಿದ್ದು, ಬಳಿಕ ಇನ್ನೊಂದಾವರ್ತಿಯಲ್ಲಿ ಮಕರಸಂಕ್ರಮಣ ದರ್ಶನಕ್ಕೆ ತೆರೆಯಲಾಗುತ್ತದೆ. ಡಿಸೆಂಬರ್ ಮೊದಲೆರಡು ವಾರಗಳಲ್ಲಿಯೂ ವಿವಿಧೆಡೆ ಶಿಬಿರಗಳ ಮೂಲಕ ಮಾಲೆ ಧರಿಸುತ್ತಾರೆ.

ಚೆಂಗನ್ನೂರಿನಿಂದ ನೀಲಕಲ್ ವರೆಗೆ ಸ್ಪಾಟ್ ಬುಕಿಂಗ್ ಮಾಡುವ 12 ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. 15 ಆಸನಗಳಿಗಿಂತ ಕಡಿಮೆ ಇರುವ ವಾಹನಗಳಿಗೆ ಪಂಪೆ ಕಡೆಗೆ ಹೋಗಲು ಅವಕಾಶವಿದೆ. ಅದಕ್ಕಿಂತ ಹೆಚ್ಚಿನ ಆಸನ ಸಾಮರ್ಥ್ಯದ ವಾಹನಗಳಿಗೆ ನೀಲಕಲ್‌ ವರೆಗೆ ಮಾತ್ರ ಪ್ರವೇಶವಿದೆ. ಅಲ್ಲಿ ಭಕ್ತರು ಇಳಿದು ಸರಕಾರಿ ಬಸ್‌ಗಳಲ್ಲಿ ತೆರಳಬೇಕು. ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ.

- Advertisement -

Related news

error: Content is protected !!