Sunday, May 5, 2024
spot_imgspot_img
spot_imgspot_img

ಹಿಜಾಬ್​ ಅಂತಿಮ ತೀರ್ಪು: ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯಾದ್ಯಾಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ. ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರ ನೇತೃತ್ವದ ತ್ರಿ ಸದಸ್ಯ ಪೀಠ ಇಂದು ಬೆಳಗ್ಗೆ 10.30ಕ್ಕೆ ತೀರ್ಪು ನೀಡಲಿದೆ.

ಹಿಜಾಬ್‌ ನಿಷೇಧ ಪ್ರಕರಣದ ಕುರಿತಾದ ತೀರ್ಪನ್ನು ಇಂದು ಕರ್ನಾಟಕ ಹೈಕೋರ್ಟ್‌ ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಾದ್ಯಂತ ಇಂದು ಬೆಳಗ್ಗೆ 6 ಗಂಟೆಯಿಂದ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ , ಕಲಬುರ್ಗಿ ಸಹಿತ ಜಿಲ್ಲೆಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರು ನಗರ, ಹಾವೇರಿ, ಉತ್ತರ ಕನ್ನಡ, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಮೈಸೂರು, ವಿಜಯಪುರ, ಚಾಮರಾಜನಗರ, ಬೆಳಗಾವಿ, ಚಿಕ್ಕಮಗಳೂರು, ಧಾರವಾಡ, ಚಿತ್ರದುರ್ಗ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ತೀರ್ಪಿನ ಹಿನ್ನೆಲೆಯಲ್ಲಿ ಹಲವು ಜಿಲ್ಲೆಯಾದ್ಯಂತ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತ್ರ ವಿವಾದದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ ಅಥವ ಪ್ರತಿಭಟನೆಯನ್ನು ನಡೆಸುವಂತಿಲ್ಲ. ಶಾಲಾ ಕಾಲೇಜು ಆವರಣದ 200ಮೀಟರ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜು ಸಿಬ್ಬಂದಿ, ಆಯಾ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಬೇರೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಗುಂಪುಗೂಡುವುದನ್ನು ನಿರ್ಬಂಧಿಸಲಾಗಿದೆ.

- Advertisement -

Related news

error: Content is protected !!