Sunday, May 19, 2024
spot_imgspot_img
spot_imgspot_img

ಹಿಜಾಬ್ ವಿವಾದ; ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

- Advertisement -G L Acharya panikkar
- Advertisement -
vtv vitla

ನವದೆಹಲಿ: ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋ‌ರ್ಟ್ ಸಮ್ಮತಿಸಿದೆ.

ತುರ್ತು ವಿಚಾರಣೆ ಕೋರಿ ಅರ್ಜಿದಾರರ ಪರ ವಕೀಲರು ಮಾಡಿದ ಮನವಿ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ‘ಎರಡು ದಿನ ಕಾಯಿರಿ. ನಿಮ್ಮ ಅರ್ಜಿಯನ್ನು ಲಿಸ್ಟ್ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ಹಿಜಾಬ್ ಧಾರಣೆ ಇಸ್ಲಾಂನಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಗಳ ಭಾಗವಲ್ಲ . ಹೀಗಾಗಿ ಅದನ್ನು ಸಂವಿಧಾನದ 25ನೇ ವಿಧಿಯಡಿ ಪರಿಗಣಿಸಲು ಬರುವುದಿಲ್ಲ ಎಂದು ಹೇಳಿದ್ದ ಕರ್ನಾಟಕ ಹೈಕೋರ್ಟ್, ಶಾಲಾ ಕೊಠಡಿಯೊಳಗೆ ಹಿಜಾಬ್ ಧರಿಸಲು ಅನುಮತಿ ನಿರಾಕರಿಸಿತ್ತು. ಜೊತೆಗೆ ಈ ಬಗ್ಗೆ ಉಡುಪಿ ಪದವಿಪೂರ್ವ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿತ್ತು .

ಇದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿರುವ ಅರ್ಜಿದಾರರು, ‘ಧಾರ್ಮಿಕ ಸ್ವಾತಂತ್ರ್ಯ ಮತ್ತು ಆತ್ಮ ಸಾಕ್ಷಿಯ ಸ್ವಾತಂತ್ರ್ಯ ಇವೆರಡರ ನಡುವಿನ ವ್ಯತ್ಯಾಸವನ್ನು ಗುರುತಿಸುವಲ್ಲಿ ಕೋರ್ಟ್ ತಪ್ಪು ಮಾಡಿದೆ. ಈ ಮೂಲಕ ಧರ್ಮವನ್ನು ಪಾಲನೆ ಮಾಡುವವರು, ಆತ್ಮಸಾಕ್ಷಿಯ ಸ್ವಾತಂತ್ರ ಹೊಂದಬೇಕಿಲ್ಲ ಎಂದು ಊಹಿಸಿದೆ. ಹಿಜಾಬ್ ಧಾರಣೆಯ ಹಕ್ಕು, ಸಂವಿಧಾನದ 21ನೇ ವಿಧಿಯಡಿ ಬರುವ ಖಾಸಗಿತನ ಹಕ್ಕಿನ ವ್ಯಾಪ್ತಿಗೆ ಬರುತ್ತದೆ. ಇದನ್ನು ಪರಿಗಣಿಸುವಲ್ಲಿ ಹೈಕೋರ್ಟ್ ವಿಫಲವಾಗಿದೆ. ಆತ್ಮಸಾಕ್ಷಿಯ ಸ್ವಾತಂತ್ರವು ಖಾಸಗಿತನ ಹಕ್ಕಿನ ಭಾಗ’ ಎಂದು ವಾದಿಸಿದ್ದಾರೆ.

- Advertisement -

Related news

error: Content is protected !!