- Advertisement -
- Advertisement -



ಹಿರಿಯ ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುಧಾಕರ್, ಸಚಿವ ಮುನಿರತ್ನ ಸಮ್ಮುಖದಲ್ಲಿ ಇಂದು ಸಂಜೆ 4.30ಕ್ಕೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕಮಲದ ಕೈಹಿಡಿಯಲಿದ್ದಾರೆ.
ಇವರ ಜೊತೆ ನೆಲಮಂಗಲದ ಕೆಲ ಜೆಡಿಎಸ್, ಕಾಂಗ್ರೆಸ್ ಮುಖಂಡರು ಬಿಜೆಪಿಯನ್ನು ಸೇರಲಿದ್ದಾರೆ. ಈ ಹಿಂದೆ ಜೆಡಿಎಸ್‌ನಲ್ಲಿ ಅನಂತ್‌ನಾಗ್ ಗುರುತಿಸಿಕೊಂಡಿದ್ದರು. ಆದರೆ ಇತ್ತೀಚೆಗಿನ ದಿನಗಳಲ್ಲಿ ರಾಜಕೀಯ ವಿಚಾರಗಳಲ್ಲಿ ಅವರು ಸಕ್ರಿಯರಾಗಿರಲಿಲ್ಲ. 1983 ರಿಂದ ಜನತಾದಳ ಪಕ್ಷದ ಜೊತೆ ಗುರುತಿಸಿಕೊಂಡಿದ್ದ ಹಿರಿಯ ನಟ, 1983, 1985, 1989ರ ಚುನಾವಣೆಗಳಲ್ಲಿ ಜನತಾದಳದ ಸ್ಟಾರ್ ಪ್ರಚಾರಕರಾಗಿದ್ದರು.
1994 ರಲ್ಲಿ ಮಲ್ಲೇಶ್ವರಂ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಅನಂತ್ ನಾಗ್, ಜೆ.ಎಚ್.ಪಟೇಲ್ ಸರ್ಕಾರದಲ್ಲಿ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ಸಚಿವರಾಗಿದ್ದರು. 1983 ರ ಲೋಕಸಭೆ ಚುನಾವಣೆಯಲ್ಲಿ ಕೂಡ ಸ್ಪರ್ಧಿಸಿದ್ದರು.
- Advertisement -








