Friday, April 26, 2024
spot_imgspot_img
spot_imgspot_img

ಹಿ.ಪ್ರಾ. ಶಾಲೆ ಮಜಿ ವೀರಕಂಬ ಶಾಲಾ ಪ್ರಾರಂಭೋತ್ಸವ ಮತ್ತು ಡೆಂಗ್ಯೂ ನಿಯಂತ್ರಣ ಮಾಹಿತಿ ಕಾರ್ಯಕ್ರಮ

- Advertisement -G L Acharya panikkar
- Advertisement -

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ 2022-23 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದ ಡೆಂಗ್ಯೂ ನಿಯಂತ್ರಣ ಮಾಹಿತಿ ಕಾರ್ಯಕ್ರಮ ನಡೆಯಿತು.

ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಶಾಲಾ ಮಕ್ಕಳನ್ನು ಶಾಲಾ ಶಿಕ್ಷಕಿಯರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಮಕ್ಕಳಿಗೆ ಪನ್ನೀರು ಹಾಗೂ ಹೂ ಸಿಂಪಡಿಸಿ ಮಕ್ಕಳನ್ನು ಶಾಲೆಗೆ ಬರ ಮಾಡಿಸಿಕೊಂಡರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ವೀರಕಂಭ ಗ್ರಾಮ ವ್ಯಾಪ್ತಿಯಲ್ಲಿ ಡೆಂಗ್ಯೂ ಇನ್ನಿತರ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯ ಹಾಗೂ ತಮ್ಮ ಪಂಚಾಯತ್ ಮಟ್ಟದಲ್ಲಿ ಪೂರ್ಣ ಸಹಕಾರ ನೀಡುವುದರ ಜೊತೆಗೆ ಶಾಲಾ ಪ್ರಾರಂಭದ ದಿನದಲ್ಲಿ ಮಕ್ಕಳ ಪೋಷಕರಿಗೆ ಇಂತಹ ಮಾಹಿತಿ ಕೊಡುವುದು ಉತ್ತಮ ಬೆಳವಣಿಗೆಯಾಗಿದೆ ಜೊತೆಗೆ ಈಗಾಗಲೇ ಶಾಲಾ ಶತಮಾನೋತ್ಸವನ್ನು ಬಹಳ ವಿಜೃಂಭಣೆಯಿಂದ ಯಶಸ್ವಿಯಾಗಿ ಆಚರಿಸಿ ಹೊಸ ಹುಮ್ಮಸ್ಸಿನಿಂದ ಶಾಲೆ ಪ್ರಾರಂಭವಾಗಿದೆ. ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ಗ್ರಾಮಸ್ಥರ ಜವಾಬ್ದಾರಿ ಬಹಳಷ್ಟು ಇರುವುದರಿಂದ ಎಲ್ಲರೂ ಸಹಕರಿಸಬೇಕಾಗಿ ವಿನಂತಿಸಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ.ಜಯಪ್ರಕಾಶ್ ಇವರು ಕೀಟ ಜನ್ಯ ರೋಗಗಳ ಲಕ್ಷಣಗಳು, ನಿಯಂತ್ರಣ, ಮುಂಜಾಗ್ರತಾ ಕ್ರಮಗಳು ಹಾಗೂ ಸ್ವಯಂ ರಕ್ಷಣೆ ಬಗ್ಗೆ ಸವಿವರವಾಗಿ ಮಾಹಿತಿ ನೀಡಿ ಸಾರ್ವಜನಿಕರು ಮತ್ತು ವಿವಿಧ ಇಲಾಖೆಗಳು ಕೈಜೊಡಿಸುವಂತೆ ಮನವಿ ಮಾಡಿದರು.

ವೇದಿಕೆಯಲ್ಲಿ ಡಾ. ಶ್ವೇತ ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಂಜೀವ ಮೂಲ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಗೌಡ ಮೈರ, ಶಾಲಾ ಮುಖ್ಯ ಶಿಕ್ಷಕರು ನಾರಾಯಣ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲ್ಲೂಕಿನ ಆರೋಗ್ಯ ನಿರೀಕ್ಷಣಾಧಿಕಾರಿಗಳು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಸಮುದಾಯ ಆರೋಗ್ಯಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಶಾಲಾ ಶಿಕ್ಷಕರು, ಮಕ್ಕಳ ಪೋಷಕರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

ಆಶಾ ಕಾರ್ಯಕರ್ತೆ ಕೋಮಲಾಕ್ಷಿ ಪ್ರಾರ್ಥಿಸಿ, ಇಂದಿರಾ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇವರು ಸ್ವಾಗತಿಸಿ, ಪವನ್ ಕುಮಾರ ಆರೋಗ್ಯ ನಿರೀಕ್ಷಣಾಧಿಕಾರಿ ವಂದಿಸಿದರು. ಕುಸುಮ ತಾಲೂಕೂ ಪ್ರಭಾರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶಾಲಾ ಮಕ್ಕಳ ಪೋಷಕರ ಜೊತೆ 2022-23ನೇ ಸಾಲಿನ ಶಾಲಾ ಶಿಕ್ಷಣ ನೀತಿಯ ಬಗ್ಗೆ ಚರ್ಚಿಸಲಾಯಿತು. ಪೋಷಕರಿಗೆ ಹಾಗೂ ಮಕ್ಕಳಿಗೆ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು.

- Advertisement -

Related news

error: Content is protected !!