Saturday, August 29, 2026
spot_imgspot_img
spot_imgspot_img

ಹುಟ್ಟು ಹಬ್ಬದಂದೇ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ಉಪನ್ಯಾಸಕಿ

- Advertisement -
- Advertisement -

ಹುಟ್ಟುಹಬ್ಬದಂದೇ ಕಾಲೇಜು ಉಪನ್ಯಾಸಕಿಯೋರ್ವರು ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜ ನಗರದಲ್ಲಿ ನಡೆದಿದೆ.

ನಗರದ ಜೆಎಸ್‌ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26) ಮೃತರು.

ಚಂದನಾ ಅವಿವಾಹಿತೆಯಾಗಿದ್ದು, ನಗರದ ಜೆಎಸ್‌ಎಸ್ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕಿಯಾಗಿದ್ದರು.

ಇನ್ನು ಇಂದು ಬೆಳಿಗ್ಗೆ 11.30 ಆದರೂ ಚಂದನಾ ಅವರು ಹಾಸ್ಟೆಲ್ ರೂಮಿನಿಂದ ಹೊರಬಾರದ ಕಾರಣ ವೆಂಟಿಲೇಟರ್ ಮೂಲಕ ನೋಡಿದಾಗ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ.

ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!