Friday, May 17, 2024
spot_imgspot_img
spot_imgspot_img

ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿಯನ್ನು 21 ವರ್ಷಕ್ಕೆ ಏರಿಸುವ ಪ್ರಸ್ತಾಪಕ್ಕೆ ಕೇಂದ್ರ ಸಂಪುಟ ಅನುಮೋದನೆ

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಭಾರತದಲ್ಲಿ ಯುವತಿಯರಿಗೆ ಕನಿಷ್ಠ 18ವರ್ಷ ಆದ ವಿನಃ ಮದುವೆ ಮಾಡುವಂತೆ ಇಲ್ಲ ಎಂಬ ಕಾನೂನು ಇತ್ತು. ಅದನ್ನೀಗ ಬದಲಿಸಿ, ಮಹಿಳೆಯರ ಮದುವೆ ವಯಸ್ಸಿನ ಮಿತಿಯನ್ನು 21ಕ್ಕೆ ಏರಿಸುವ ಪ್ರಸ್ತಾಪವನ್ನು ಬುಧವಾರ ಕೇಂದ್ರ ಸಂಪುಟ ಅಂಗೀಕರಿಸಿದೆ. ಯುವತಿಯರ ಮದುವೆ ವಯಸ್ಸನ್ನು 18ವರ್ಷಕ್ಕೆ ನಿಗದಿಪಡಿಸಲಾಗಿದೆ. ಅದನ್ನು ಮರುಪರಿಶೀಲನೆ ಮಾಡಲಾಗುವುದು.

ಇದಕ್ಕಾಗಿ ಒಂದು ಸಮಿತಿ ರಚಿಸಲಾಗುವುದು ಎಂದು 2020ರ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದರು. ಒಂದೂವರೆ ವರ್ಷದ ಬಳಿಕ ಅದನ್ನೀಗ ಅನುಷ್ಠಾನಕ್ಕೆ ತರಲು ಕೇಂದ್ರ ಸಂಪುಟ ಮುಂದಡಿ ಇಟ್ಟಿದೆ.

vtv vitla

ದೇಶದಲ್ಲಿ ಇರುವ ಬಾಣಂತಿ-ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು, ಪೌಷ್ಟಿಕಾಂಶದ ಕೊರತೆ ನೀಗಿಸಲು ಮತ್ತು ಮಹಿಳೆಯರ ಮದುವೆ ವಯಸ್ಸಿನ ಮಿತಿ ಹೆಚ್ಚಿಸುವುದರಿಂದ, ಸಹಜವಾಗಿಯೇ ತಾಯ್ತನದ ವಯಸ್ಸಿನ ಮಿತಿಯೂ ಏರುತ್ತದೆ.

ಹೀಗಾಗಿ ಒಂದಷ್ಟು ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಅದರ ಬಗ್ಗೆ ಪರಿಶೀಲಿಸಲು ಕೇಂದ್ರ ಸರ್ಕಾರ ಒಂದು ಟಾಸ್ಕ್​ಫೋರ್ಸ್ ರಚಿಸಿತ್ತು. ಈ ಟಾಸ್ಕ್ ಫೋರ್ಸ್​ನ ಶಿಫಾರಸ್ಸಿನ ಅನ್ವಯ ಪ್ರಸ್ತಾಪಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

vtv vitla
vtv vitla

ಈ ಟಾಸ್ಕ್​ಫೋರ್ಸ್​ನ್ನು 2020ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಚಿಸಿತ್ತು. ಇದರಲ್ಲಿ ನೀತಿ ಆಯೋಗದ ಡಾ.ವಿ.ಕೆ.ಪೌಲ್​, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆರೋಗ್ಯ , ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು, ಕಾನೂನು ಇಲಾಖೆಯ ಸಿಬ್ಬಂದಿ ಕೂಡ ಇದ್ದರು.

ಇದೀಗ ಪ್ರಸ್ತಾಪಕ್ಕೆ ಅನುಮೋದನೆ ಸಿಕ್ಕಿದ ಬಳಿಕ, ಸರ್ಕಾರ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ಕ್ಕೆ ತಿದ್ದುಪಡಿ ತರುತ್ತದೆ. ವಿಶೇಷ ವಿವಾಹ ಕಾಯ್ದೆ ಮತ್ತು ಹಿಂದೂ ವಿವಾಹ ಕಾಯ್ದೆ, 1955 ರಂತಹ ವೈಯಕ್ತಿಕ ಕಾನೂನುಗಳಿಗೆ ತಿದ್ದುಪಡಿಗಳನ್ನು ತರಲು ಮುಂದಾಗಲಿದೆ.

vtv vitla
vtv vitla
vtv vitla
- Advertisement -

Related news

error: Content is protected !!