Wednesday, July 22, 2026
spot_imgspot_img
spot_imgspot_img

ಕೊರೋನಾ ಕಷ್ಟ ಕೊನೆಯಾಗುವ ಹಂತದವರೆಗೆ 10 ಕೆಜಿ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ – ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿ0ದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವಂತ ಅವರು, ಲಸಿಕೆ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಬಿಜೆಪಿ ಸರ್ಕಾರ, ಅದರ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ. ಪ್ರಧಾನಿ ನರೇಂದ್ರ ಮೋದಿಯವರೇ ‘ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಎಂದಿದ್ದಾರೆ.

- Advertisement -

Related news

error: Content is protected !!