Friday, April 19, 2024
spot_imgspot_img
spot_imgspot_img

ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ”100″ರ‘ ರಂಗು ರಂಗು ಪಾರ್ಟಿಸಾಂಗ್.

- Advertisement -G L Acharya panikkar
- Advertisement -

ಬೆಂಗಳೂರು: ಇಂದು (ಸೆಪ್ಟೆಂಬರ್ 10) ರಮೇಶ್​ ಅರವಿಂದ್ ಅವರ ಹುಟ್ಟುಹಬ್ಬ.ಇದೀಗ ಮತ್ತೆ 100 ಅನ್ನೋ ಸಿನಿಮಾ ಮೂಲಕ ಮತ್ತೊಂದು ಅವತಾರದಲ್ಲಿ ಪ್ರೇಕ್ಷಕರನ್ನು ತಾಕುವ ಖುಷಿಯಲ್ಲಿದ್ದಾರೆ. ಅದೇ ಖುಷಿಯಲ್ಲಿ ಚಿತ್ರತಂಡ ರಮೇಶ್ ಅರವಿಂದ್ ಅವರ ಬರ್ತ್‍ಡೇ ಸ್ಪೆಷಲ್ ಎಂಬಂತೆ 100 ಚಿತ್ರದ ಚಿತ್ರದ ಒಂದು ಹಾಡನ್ನಂತೂ ಇಂದು ಬಿಡುಗಡೆ ಮಾಡಲಾಗಿದೆ.

ಇದು ಪಾರ್ಟಿ ಮೂಡಿಗೆ ಜಾರಿಸುವಂಥ ಮಜವಾದ ಹಾಡು. ವಿಶೇಷ ಅಂದ್ರೆ ಈ ಹಾಡಿಗೆ ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ.‘ಚಿತ್ರದಲ್ಲಿ ಹುಟ್ಟುಹಬ್ಬದ ಕುರಿತಾದ ಒಂದು ಹಾಡಿದೆ. ಕಿನ್ನಲ್ ರಾಜ್, ಪ್ರಮೋದ್ ಮರವಂತೆ ಮತ್ತು ಭಾಸ್ಕರ್ ಬಂಗೇರ ಸೇರಿಕೊಂಡು ಈ ಹಾಡಿಗೆ ಸಾಹಿತ್ಯ ಒದಗಿಸಿದ್ದಾರೆ. ರಮೇಶ್ ಅರವಿಂದ್, ಅನನ್ಯಾ ಭಟ್ ಮತ್ತು ನೀತು ಸುಬ್ರಹ್ಮಣ್ಯ ಅಷ್ಟೇ ಮಜವಾಗಿ ಹಾಡಿದ್ದಾರೆ.

ಈ ಚಿತ್ರದಲ್ಲಿ ರಮೇಶ್​ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಜತೆಗೆ ಪೂರ್ಣಾ, ರಚಿತಾ ರಾಮ್​, ವಿಶ್ವ, ಅಮಿತಾ ರಂಗನಾಥ್ ಮುಂತಾದವರು ನಟಿಸಿದ್ದಾರೆ. ಇನ್ನು ಸತ್ಯ ಹೆಗಡೆ ಛಾಯಾಗ್ರಹಣ ಮಾಡಿದರೆ, ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ.ರಮೇಶ್​ ರೆಡ್ಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

- Advertisement -

Related news

error: Content is protected !!