Wednesday, June 24, 2026
spot_imgspot_img
spot_imgspot_img

ತುಂಬೆ ಪ್ರೌಢಶಾಲೆಯ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

- Advertisement -
- Advertisement -

ತುಂಬೆ ಪ್ರೌಢಶಾಲೆಯು ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಆಂಗ್ಲಮಾಧ್ಯಮ ಮತ್ತು ಕನ್ನಡ ಮಾಧ್ಯಮ ವಿಭಾಗದಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇಕಡಾ 100 ಫಲಿತಾಂಶದೊಂದಿಗೆ ದಾಖಲೆ ಸೃಷ್ಟಿಸಿದೆ. ಆಂಗ್ಲಮಾಧ್ಯಮ ವಿಭಾಗದಲ್ಲಿ 81 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 18 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. 61 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ O2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಹೊಂದಿ ಒಟ್ಟು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ. ಆಂಗ್ಲ ಮಾಧ್ಯಮ ವಿಭಾಗದಲ್ಲಿ ಅಮೀನ ಶಹ್‌ಬಾ 607 (97.12%) ಅಂಕಗಳೊಂದಿಗೆ ಪ್ರಥಮ ಸ್ಥಾನ ಹಾಗೂ ಥಾಮ್ಸನ್ ರೆಕ್ಸ್ ಫೆರ್ನಾಂಡಿಸ್ 603 (96.48%) ಅಂಕದೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ತುಂಬೆ ಪ್ರೌಢಶಾಲೆಯ ಕನ್ನಡ ಮಾಧ್ಯಮದಲ್ಲಿ 36 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದು, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಕಾವ್ಯಶ್ರೀ 581 (92.96%) ಅಂಕಗಳೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.

- Advertisement -

Related news

error: Content is protected !!