Sunday, May 5, 2024
spot_imgspot_img
spot_imgspot_img

ಮಂಗಳೂರು: ಮೆಡಿಕಲ್ ಕಾಲೇಜು ಹಾಸ್ಟೆಲ್‌ನಲ್ಲಿ ಫುಡ್‌ ಪಾಯ್ಸನ್; 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

- Advertisement -G L Acharya panikkar
- Advertisement -

ಮಂಗಳೂರು: ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ವಾಸವಿದ್ದ ಹಾಸ್ಟೆಲ್‌ನಲ್ಲಿ ಫುಡ್ ಪಾಯ್ಸನ್ ಆಗಿ 100 ಕ್ಕೂ ಅಧಿಕ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ನಗರದ ಶಕ್ತಿನಗರದಲ್ಲಿರುವ ಖಾಸಗಿ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ಘಟನೆ ನಡೆದಿದ್ದು ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಭಾನುವಾರ ಆಹಾರ ಸೇವಿಸಿದ್ದ ಕೆಲವು ವಿದ್ಯಾರ್ಥಿನಿಯರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಸೋಮವಾರ ಮಧ್ಯಾಹ್ನ ಹಾಸ್ಟೆಲ್‌ನ ಬಹುತೇಕ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಬಳಿಕ ಎ.ಜೆ ಆಸ್ಪತ್ರೆಯಲ್ಲಿ 52, ಕೆಎಂಸಿ ಜ್ಯೋತಿಯಲ್ಲಿ 18 , ಫಾಧರ್ ಮುಲ್ಲರ್ ನಲ್ಲಿ 42 , ಸಿಟಿ ಆಸ್ಪತ್ರೆಯಲ್ಲಿ 8, ಮಂಗಳಾ ನರ್ಸಿಂಗ್ ಹೋಂನಲ್ಲಿ ಮೂವರನ್ನು ದಾಖಲಿಸಲಾಗಿದೆ.

ವಿಷಾಹಾರ ಸೇವನೆಯ ವಿದ್ಯಾರ್ಥಿನಿಯರನ್ನು ದಾಖಲು ಮಾಡಿದ ಆಸ್ಪತ್ರೆ ಬಳಿ ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದಾರೆ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಹಾಗೂ ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಕೆ.ಜಗದೀಶ, ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌, ಶಾಸಕ ವೇದವ್ಯಾಸ ಕಾಮತ್‌ ಹಾಗೂ ಕಾಂಗ್ರೆಸ್‌ ಮುಖಂಡ ಜೆ.ಆರ್‌.ಲೋಬೊ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ.

ಇನ್ನು ವಿದ್ಯಾರ್ಥಿನಿಯರು ಹೇಳುವ ಪ್ರಕಾರ ಕೆಲ ದಿನಗಳಿಂದ ನೀರಿನ ಸಮಸ್ಯೆ ಆಗುತ್ತಿದೆ. ಹಲವು ಬಾರಿ ಒಂದಿಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದೂ ಇದೆ. ನೀರಿನ ಸಮಸ್ಯೆ ಕಾರಣದಿಂದ ಘಟನೆ ನಡೆದಿರಬಹುದು ಎಂದ್ದಿದ್ದಾರೆ. ಆದರೆ ಈ ರೀತಿ ಆಗಲ ಯಾವುದು ನಿರ್ದಿಷ್ಟ ಕಾರಣ ಎಂಬುವುದು ತನಿಖೆಯಲ್ಲಷ್ಟೇ ತಿಳಿದುಬರಬೇಕಿದೆ.

- Advertisement -

Related news

error: Content is protected !!