




ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕ ಚಂದ್ರಶೇಖರ್ ರಾವ್ ಬಪ್ಪಳಿಗೆ ರವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜೀವನ ಚರಿತ್ರೆಯ ಕುರಿತು ಮಾತನಾಡಿ ದೀನ್ ದಯಾಳ್ ಉಪಾಧ್ಯಾಯರ ಏಕತ್ಮಮಾನವತ ದರ್ಶನದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಹಿರಿಯರಾದ ಅಪ್ಪಯ್ಯ ಮಣಿಯಾಣಿ, ಚನಿಲ ತಿಮ್ಮಪ್ಪ ಶೆಟ್ಟಿ, ಗೋಪಾಲಕೃಷ್ಣ ಹೇರಳೆ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ರಾಜ್ಯ ಹಿಂದುಳಿದ ಮೋರ್ಛದ ಆರ್.ಸಿ ನಾರಾಯಣ, ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭೆಯ ಅಧ್ಯಕ್ಷೆ ಲೀಲಾವತಿ ಕೃಷ್ಣನಗರ, ಪ್ರಧಾನ ಕಾರ್ಯದರ್ಶಿಗಳಾದ ನಾಗೇಶ್ ಪ್ರಭು, ಅನಿಲ್ ತೆಂಕಿಲ, ಉಮೇಶ್ ಕೋಡಿಬೈಲು, ಎರಡು ಮಂಡಲಗಳ ನಿಕಟಪೂರ್ವ ಅಧ್ಯಕ್ಷರುಗಳಾದ ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ ಜಗನ್ನಿವಾಸ ರಾವ್ , ಮುರಳಿಕೃಷ್ಣ ಹಸಂತಡ್ಕ, ಪಕ್ಷದ ಜಿಲ್ಲಾ ಮಟ್ಟದ ಪ್ರಮುಖರು, ನಗರ ಹಾಗೂ ಗ್ರಾಮಾಂತರ ಮಂಡಲದ ಮಟ್ಟದ ಪ್ರಮುಖರು, ನಗರ ಹಾಗೂ ಗ್ರಾಮಾಂತರ ಮಂಡಲಗಳ ನಿಕಟಪೂರ್ವ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರಗಳ ಪ್ರಮುಖರು, ಶಕ್ತಿಕೇಂದ್ರಗಳ ಪ್ರಮುಖರು ಸೇರಿದಂತೆ ಹಲವರು ಉಪಸ್ಥಿತರಿದ್ದರು.








