Friday, June 19, 2026
spot_imgspot_img
spot_imgspot_img

12ನೇ ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ವಿದ್ಯಾರ್ಥಿನಿಯೊಬ್ಬಳು 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ. ಜೆಸ್ಸಿಕಾ (15) ಮೃತ ದುರ್ದೈವಿ.

ಜೆಸ್ಸಿಕಾ ಪೋಷಕರು ಮೂಲತಃ ತಮಿಳುನಾಡಿನವರು. ಜೆಸ್ಸಿಕಾ ತಂದೆ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.ತಾಯಿ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿದ್ದಾರೆ. ಕಳೆದ ಎರಡು ವರ್ಷದಿಂದ ಕ್ಲಾಸಿಕ್ ಅಪಾರ್ಟ್ಮೆಂಟ್‌ನ 11ನೇ ಮಹಡಿಯಲ್ಲಿ ಇದ್ದರು.

ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ಜೆಸ್ಸಿಕಾ, ಇತ್ತೀಚೆಗೆ ಶಾಲೆಗೂ ಸರಿಯಾಗಿ ಹೋಗುತ್ತಿರಲಿಲ್ಲ. ಕಳೆದ ಮೂರು ತಿಂಗಳಲ್ಲಿ 6 ದಿನ ಮಾತ್ರ ತರಗತಿಗೆ ಹೋಗಿದ್ದಳು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸದ್ಯ ಘಟನೆ ಸಂಬಂಧ ಬೆಳ್ಳಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೆಸ್ಸಿಕಾ ಮಾನಸಿಕವಾಗಿ ನೊಂದಿದ್ದಳು ಎನ್ನಲಾಗಿದ್ದು, ಬೆಳ್ಳಂದೂರು ಪೊಲೀಸರಿಂದ ತನಿಖೆ ಮುಂದುವರೆದಿದೆ.

- Advertisement -

Related news

error: Content is protected !!