Tuesday, April 30, 2024
spot_imgspot_img
spot_imgspot_img

ಶಾಲೆ ಕಟ್ಟಡದಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು..!

- Advertisement -G L Acharya panikkar
- Advertisement -

10ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಶಾಲಾ ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ.

ಶುಕ್ರವಾರ ಬೆಳಿಗ್ಗೆ 8.45ರ ಸುಮಾರಿಗೆ ಸನ್ ಬೀಮ್ ಶಾಲೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸಿಸಿಟಿಯಲ್ಲಿ ಈ ದೃಶ್ಯ ಸೆರೆಯಾಗಿದೆ.

ಶಾಲೆಗೆ ಬೇಸಿಗೆ ರಜೆ ಇದ್ದಾಗ ತರಗತಿಗೆ ಬರುವಂತೆ ಶಾಲೆಯ ಆಡಳಿತ ಮಂಡಳಿ ಕರೆ ಮಾಡಿದೆ. ಶಾಲೆಗೆ ಹೋದ ಸ್ವಲ್ಪ ಹೊತ್ತಿನಲ್ಲೇ ಅಂದರೆ ಸುಮಾರು 10 ಗಂಟೆಗೆ ಮಗಳ ಸಾವಿನ ಸುದ್ದಿ ಬಂದಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಆದರೆ ವಿದ್ಯಾರ್ಥಿನಿ ಆಕಸ್ಮಿಕವಾಗಿ ಮೇಲಿಂದ ಬಿದ್ದು ಮೃತಪಟ್ಟಿದ್ದಾಳೆ ಎಂದು ಶಾಲೆಯ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಆದರೆ ಆಕೆ ಮಹಡಿಯ ಮೇಲೆ ಯಾಕೆ ಹೋಗಿದ್ದಳು ಎಂಬ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

- Advertisement -

Related news

error: Content is protected !!