Monday, April 29, 2024
spot_imgspot_img
spot_imgspot_img

11 ಪಂದ್ಯ 3 ಶತಕ, 765 ರನ್ : ವಿಶ್ವಕಪ್‌ ಸೋತರು ವಿಶ್ವದಾಖಲೆ ಬರೆದ ವಿರಾಟ್‌ ಕೊಹ್ಲಿ

- Advertisement -G L Acharya panikkar
- Advertisement -

ವಿಶ್ವಕಪ್‌ 2023 ಫೈನಲ್‌ನಲ್ಲಿ ಭಾರತ ಸೋಲು ಕಂಡಿದೆ. 3 ನೇ ಬಾರಿಗೆ ವಿಶ್ವಕಪ್‌ ಗೆಲ್ಲುವ ಶತಕೋಟಿ ಭಾರತೀಯರ ಕನಸು ಕೊನೆಗೂ ಈಡೇರಿಲ್ಲ. ಸೋಲಿನ ನೋವಲ್ಲೂ ವಿರಾಟ್‌ ಕೊಹ್ಲಿ ಸರಣಿಶ್ರೇಷ್ಟ ಪ್ರಶಸ್ತಿ ಪಡೆದುಕೊಂಡಿರುವುದು ಭಾರತೀಯರಿಗೆ ಸಮಾಧಾನ ತರಿಸಿದೆ. ವಿಶ್ವಕಪ್‌ನಲ್ಲಿ ವಿರಾಟ್‌ ಆಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ವಿರಾಟ್‌ ಕೊಹ್ಲಿ ಸದ್ಯ ಅತೀ ಹೆಚ್ಚು ಶತಕ ಸಿಡಿಸಿದ ವಿಶ್ವದ ಅಗ್ರಗಣ್ಯ ಆಟಗಾರ. ವಿಶ್ವಕಪ್‌ನಲ್ಲಿ 11 ಇನ್ನಿಂಗ್ಸ್‌ಗಳನ್ನು ಆಡಿರುವ ವಿರಾಟ್‌ ಕೊಹ್ಲಿ ಭಾರತ ತಂಡವನ್ನು ಫೈನಲ್‌ಗೆ ಏರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಕೊಹ್ಲಿ 11 ಇನ್ನಿಂಗ್ಸ್‌ಗಳಲ್ಲಿ ಒಟ್ಟು 765 ರನ್ ಗಳಿಸಿದ್ದಾರೆ. ಈ ಮೂಲಕ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಗರಿಷ್ಠ ರನ್‌ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಈ ಬಾರಿಯ ವಿಶ್ವಕಪ್‌ನಲ್ಲಿ ವಿರಾಟ್‌ ಕೊಹ್ಲಿ 11 ಇನ್ನಿಂಗ್ಸ್‌ ಗಳನ್ನು ಆಡಿದ್ದು, 95.62 ರ ಸರಾಸರಿಯಲ್ಲಿ 90.3 ಸ್ಟ್ರೈಕ್‌ ರೇಟ್‌ ಹೊಂದಿದ್ದಾರೆ. ಅದರಲ್ಲೂ 6 ಅರ್ಧಶತಕ ಹಾಗೂ 3 ಶತಕಗಳು ಒಳಗೊಂಡಿವೆ. ಅಷ್ಟೇ ಅಲ್ಲದೇ ಫೈನಲ್‌ ಪಂದ್ಯದಲ್ಲಿ ಭಾರತ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲೂ 63 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ತಂಡಕ್ಕೆ ನೆರವಾದರು.

ವಿಶ್ವಕಪ್‌ 2023 ನ್ನು ಭಾರತ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಅಜೇಯ ವಾಗಿ ಫೈನಲ್‌ಗೆ ಎಂಟ್ರಿ ಕೊಟ್ಟಿದ್ದ ಭಾರತ ತಂಡ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಮುಗ್ಗರಿಸಿತ್ತು. ಆದರೂ ಕೂಡ ವಿರಾಟ್‌ ಕೊಹ್ಲಿ ವಿಶ್ವಕಪ್ ನಲ್ಲಿ ವಿರಾಟ್‌ ಕೊಹ್ಲಿ ಸರಣಿ ಶ್ರೇಷ್ಟ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

35 ವರ್ಷ ವಯಸ್ಸಿನ ವಿರಾಟ್‌ ಕೊಹ್ಲಿ ವಿಶ್ವಕಪ್‌ನಲ್ಲಿ ತಮ್ಮ 50ನೇ ಏಕದಿನ ಅಂತಾರಾಷ್ಟ್ರೀಯ ಶತಕವನ್ನು ಪೂರೈಸುವ ಮೂಲಕ ಕ್ರಿಕೆಟ್‌ ದಂತಕಥೆ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯನ್ನು ಅಳಿಸಿದ್ದಾರೆ. ಸಚಿನ್‌ ತೆಂಡೂಲ್ಕರ್ 49 ಏಕದಿನ ಶತಕಗಳನ್ನು ಬಾರಿಸುವ ಮೂಲಕ ವಿಶ್ವದಾಖಲೆ ಬರೆದಿದ್ದರು.

- Advertisement -

Related news

error: Content is protected !!