Thursday, June 24, 2021
spot_imgspot_img
spot_imgspot_img

ನಡುರಾತ್ರಿ ಕಟ್ಟಡ ಕುಸಿತ: ನಿದ್ದೆಯಲ್ಲಿದ್ದವರ ದುರ್ಮರಣ

- Advertisement -
- Advertisement -

ಮುಂಬೈ: ನಿನ್ನೆ ಮಧ್ಯರಾತ್ರಿ ಕಟ್ಟಡವೊಂದು ಕುಸಿದುಬಿದ್ದು, 11 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮಲಾಡ್ ವೆಸ್ಟ್ನ ನ್ಯೂ ಕಲೆಕ್ಟರ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಹಲವರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ. ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಸದ್ಯ ಗಾಯಾಳುಗಳನ್ನು ಹತ್ತಿರದ ಬಿಡಿಬಿಎ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟೂ 15 ಮಂದಿಯನ್ನು ರಕ್ಷಿಸಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಟ್ಟಡ ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರೆಸಿದ್ದೇವೆ. ಇನ್ನೂ ಹೆಚ್ಚಿನ ಸಾವುನೋವು ಸಂಭವಿಸಿರುವ ಸಾಧ್ಯತೆ ಇದೆ ಎಂದು ಉಪ ಪೊಲೀಸ್ ಆಯುಕ್ತ ವಿಶಾಲ್ ಠಾಕೂರ್ ಮಾಹಿತಿ ನೀಡಿದ್ದಾರೆ.

ಕೆಲ ದಿನಗಳಲ್ಲಿ ಇಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಟ್ಟಡ ಕುಸಿದಿರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದವು. ಈ ಕಟ್ಟಡ ಕೂಡ ಅಂಥದ್ದೇ ಒಂದು ಜಾಗದಲ್ಲಿ ಇದೆ ಎನ್ನಲಾಗಿದೆ.

- Advertisement -
- Advertisement -

MOST POPULAR

HOT NEWS

Related news

error: Content is protected !!